ಕರ್ನಾಟಕ

ಶಿವಮೊಗ್ಗದಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಸುಸಜ್ಜಿತ ಕ್ಷೇಮ ಕೇಂದ್ರ ಸ್ಥಾಪಿಸಲು ಕೇಂದ್ರ ಆರೋಗ್ಯ ಸಚಿವರಿಗೆ ಸಂಸದ ಬಿ.ವೈ.ಆರ್ ಮನವಿ

Pinterest LinkedIn Tumblr

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸತ್ ಸದಸ್ಯ ಬಿ.ವೈ ರಾಘವೇಂದ್ರ ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಮನ್ಸುಖ ಮಾಂಡವೀಯ ಅವರನ್ನು ಭೇಟಿ ಮಾಡಿದರು.

ಕೇಂದ್ರ ಸರ್ಕಾರಿ ನೌಕರರ ಮತ್ತು ನಿವೃತ್ತ ನೌಕರರ ಕುಟುಂಬಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರದ ಆರೋಗ್ಯ ಸೇವೆ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಕ್ಷೇಮ ಕೇಂದ್ರವನ್ನು (ಸಿ.ಜಿ.ಎಚ್.ಎಸ್ ವೆಲ್ ನೆಸ್ ಸೆಂಟರ್) ಕೂಡಲೇ ಆರಂಭಿಸಲು ಮನವಿ ಮಾಡಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 3500 ಸಾವಿರ ಕೇಂದ್ರ ಸರ್ಕಾರದ ನೌಕರರು ಹಾಗೂ ನಿವೃತ್ತ ನೌಕರರಿದ್ದು, ಇವರುಗಳ ಕ್ಷೇಮಾಭಿವೃದ್ಧಿಯನ್ನು ಕಾಪಾಡಿಕೊಂಡು ಬರಲು ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಕ್ಷೇಮ ಕೇಂದ್ರದ ಅವಶ್ಯಕತೆ ಇದ್ದು, ಹಾಲಿ ಬೆಂಗಳೂರು, ಮೈಸೂರು ಹಾಗೂ ಹುಬ್ಬಳ್ಳಿಯಲ್ಲಿ ಇಂತಹ ಕ್ಷೇಮ ಕೇಂದ್ರವನ್ನು ಕೇಂದ್ರ ಸರ್ಕಾರ ತೆರೆದಿದೆ. ಆದರೆ, ತುರ್ತು ಸಂದರ್ಭಗಳಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ನೆಲೆಸಿರುವ ಕೇಂದ್ರ ಸರ್ಕಾರದ ನೌಕರರಿಗೆ ಈ ಸೇವೆಯನ್ನು ಪಡೆಯಲು ಸಮಯದ ಅಭಾವದಿಂದ ಅನಾನುಕೂಲ ಉಂಟಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಒಂದು ಕ್ಷೇಮ ಕೇಂದ್ರವನ್ನು ಶಿವಮೊಗ್ಗದಲ್ಲಿ ಕೂಡಲೇ ಆರಂಭಿಸಲು ಮನವಿ ಮಾಡಿಕೊಂಡರು. ರಾಜ್ಯ ಸರ್ಕಾರದಿಂದ ಅವಶ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಕೊಡಲಾಗುವುದು ಎಂದು ಈ ಸಂದರ್ಭದಲ್ಲಿ ಕೋರಿದ್ದಾರೆ ಎಂದು ಸಂಸದರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

Comments are closed.