ಕರಾವಳಿ

ಶಿರ್ವದಲ್ಲಿ ಭೀಕರ ರಸ್ತೆ ಅಪಘಾತ; ಕಾರಿನಲ್ಲಿದ್ದ ಮಹಿಳೆ, ಯುವಕ ಮೃತ್ಯು

Pinterest LinkedIn Tumblr

ಉಡುಪಿ: ಕಟಪಾಡಿ- ಶಿರ್ವ ಮುಖ್ಯರಸ್ತೆಯ ಪಂಜಿಮಾರು ಪಾಲಮೆ ಎಂಬಲ್ಲಿ ಕಾರು ಮತ್ತು ಟೆಂಪೋ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಯುವಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಕೊನೆಯುಸಿರೆಳೆದಿರುವ ಅವಘಡ ಶನಿವಾರ ಸಂಜೆ ನಡೆದಿದೆ.

ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸ್ ಅಧಿಕಾರಿಗಳು ಸಿಬಂದಿಗಳೊಂದಿಗೆ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಮೂಡಬಿದಿರೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರಿಗೆ ಕಟಪಾಡಿಯಿಂದ ಶಿರ್ವ ಕಡೆಗೆ ತೆರಳುತ್ತಿದ್ದ ಟೆಂಪೋ ಮುಖಾಮುಖಿಯಾಗಿ ಅವಘಡ ಸಂಭವಿಸಿದೆ. ಯುವಕನ ಸ್ಥಿತಿ ಚಿಂತಾಜನಕವಾಗಿತ್ತು. ಉಡುಪಿಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು ವೈದ್ಯರು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

ಬೆಂಗಳೂರು ಮೂಲದ ಕಾರು ಎಂದು ತಿಳಿದು ಬಂದಿದ್ದು, ಮೃತರ ಸ್ಪಷ್ಟ ಗುರುತು ಇನ್ನಷ್ಟೇ ತಿಳಿದು ಬರಬೇಕಿದೆ.

 

Comments are closed.