ಕರಾವಳಿ

ಕ್ರೇನ್ ಡಿಕ್ಕಿಯಾಗಿ ಬೈಕ್ ಹಿಂಬದಿ ಸವಾರ ಸ್ಥಳದಲ್ಲೇ ದಾರುಣ ಸಾವು; ಕ್ರೇನ್ ಚಾಲಕ ಪರಾರಿ

Pinterest LinkedIn Tumblr

ಕುಂದಾಪುರ: ಚಲಿಸುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಕ್ರೇನ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಹಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದ ಪಾನಕದಕಟ್ಟೆ ಎಂಬಲ್ಲಿ ಡಿ.26ರಂದು ನಡೆದಿದೆ.

ತಾಲೂಕಿನ ಹುಣ್ಸೆಮಕ್ಕಿ ಸಮೀಪದ ಹೊಂಬಾಡಿ ನಿವಾಸಿ ಪ್ರಶಾಂತ  ಮೊಗವೀರ (31) ಮೃತ ಯುವಕ. ಪ್ರಶಾಂತ್ ಅವರು ದಿನೇಶ್ ಪೂಜಾರಿ ಎಂಬವರ ಬೈಕ್ ಹಿಂಬದಿಯಲ್ಲಿ ಕುಳಿತು ಕುಂದಾಪುರ ಕಡೆಯಿಂದ ಸಿದ್ದಾಪುರ ಕಡೆಗೆ ತೆರಳುತ್ತಿದ್ದಾಗ ನೋಂದಣಿ ಸಂಖ್ಯೆ ಇಲ್ಲದ ಹೊಸ ಕ್ರೇನ್ ಅನ್ನು ಅಪರಿಚಿತ ಚಾಲಕ ವೇಗ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿ ಬೈಕ್ ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ. ಇದರ ಪರಿಣಾಮ ಬೈಕ್ ಸಮೇತ ಇಬ್ಬರು ಸವಾರರು ರಸ್ತೆಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ದಿನೇಶ್ ಪೂಜಾರಿ ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಾಯಾದಿಂದ ಪಾರಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಳಿಕ ಕ್ರೇನ್ ಅನ್ನು ಸ್ಥಳದಲ್ಲೆ ನಿಲ್ಲಿಸಿದ ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ.

ಈ ಬಗ್ಗೆ ಕುಂದಾಪುರ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಬಡ ಕುಟುಂಬ ಕಂಗಾಲು:
ಪ್ರಶಾಂತ್ ಮೊಗವೀರ ಚಾಲಕ ವೃತ್ತಿ ಮಾಡಿಕೊಂಡಿದ್ದು ಅವಿವಾಹಿತರಾಗಿದ್ದರು. ತಂದೆ ತಾಯಿ ಹಾಗೂ ಇಬ್ಬರು ಹಿರಿಯ ಸಹೋದರಿಯರಿದ್ದು ಬಡತನದ ಕುಟುಂಬ ಇವರನ್ನೇ ಅವಲಂಭಿಸಿತ್ತು. ಮಗನ ಸಾವಿನ ಸುದ್ದಿ ತಿಳಿದು ಇಡೀ ಕುಟುಂಬ ದಿಕ್ಕು ತೋಚದಂತಾಗಿದೆ.

Comments are closed.