ಪ್ರಮುಖ ವರದಿಗಳು

ಪ್ರಧಾನಿ ಮೋದಿಗೆ ಮಾತೃ ವಿಯೋಗ; ಇಹಲೋಕ ತ್ಯಜಿಸಿದ ಶತಾಯುಷಿ ಹೀರಾಬೆನ್ ಮೋದಿ

Pinterest LinkedIn Tumblr

ಅಹಮದಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಾಯಿ, ಶತಾಯುಷಿ ಹೀರಾಬೆನ್ ಮೋದಿಯವರು ಗುಜರಾತ್​​ನ ಅಹಮದಾಬಾದ್​ನಲ್ಲಿ ಶುಕ್ರವಾರ ನಿಧನರಾದರು.

ಹೀರಾಬೆನ್ ಅವರಿಗೆ 100 ವರ್ಷ ವಯಸ್ಸಾಗಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ನಗರದ ಯುಎನ್​ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.

ಹೀರಾಬೆನ್ ಮೋದಿ ಅವರು 2022ರ ಜೂನ್ 18ರಂದು 100ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು. ಪ್ರಧಾನಿ ಮೋದಿ ಅವರು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿ ತಾಯಿಗೆ ಶುಭಾಶಯ ತಿಳಿಸಿ, ಆಶೀರ್ವಾದ ಪಡೆದಿದ್ದರು. ತಾಯಿಯ ಪಾದ ತೊಳೆದು ಪೂಜಿಸಿದ್ದರು.

ಹೀರಾಬೆನ್‌ ನಿಧನಕ್ಕೆ ಗಣ್ಯರೆಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ.

Comments are closed.