ಕುಂದಾಪುರ: ತಾಲೂಕಿನ ಬಾಂಡ್ಯಾ ಕೊಡ್ಲಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ, ಕರ್ಕುಂಜೆ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಬಾಂಡ್ಯಾ ಸುಧಾಕರ ಶೆಟ್ಟಿ 1 ಲಕ್ಷ ನಗದು ದೇಣಿಗೆಯಾಗಿ ಮಂಗಳವಾರ ಶಾಲೆಗೆ ಹಸ್ತಾಂಕರಿಸಿದರು.
ಶಾಲಾ ಮುಖ್ಯೋಪಾಧ್ಯಾಯ ಸಂತೋಷ್ ಕುಮಾರ್ ಶೆಟ್ಟಿಯವರಿಗೆ ಧನಸಾಯವನ್ನು ಹಸ್ತಾಂತರಿಸಿ ಮಾತನಾಡಿದ ಬಾಂಡ್ಯಾ ಸುಧಾಕರ ಶೆಟ್ಟಿ, ಭೌತಿಕವಾಗಿ ಶೈಕ್ಷಣಿಕವಾಗಿ ಪ್ರಗತಿ ಹೊಂದುತ್ತಾ ಗುಣಾತ್ಮಕ ಶಿಕ್ಷಣ ನೀಡುತ್ತಿರುವ ನಮ್ಮೂರ ಶಾಲೆ ಆಕರ್ಷಣೆಯ ಕೇಂದ್ರವಾಗಲಿ ಎಂದರು.
ಗುರುಕುಲ ಪಬ್ಲಿಕ್ ಸ್ಕೂಲ್ ಜಂಟಿ ಕಾರ್ಯನಿರ್ವಾಹಕರಾದ ಬಾಂಡ್ಯ ಸುಭಾಷ್ಚಂದ್ರ ಶೆಟ್ಟಿ ಹಾಗೂ ಅನುಪಮಾ ಎಸ್ ಶೆಟ್ಟಿ ಶುಭ ಹಾರೈಸಿದರು. ಎಸ್.ಡಿ.ಎಂ.ಸಿ ಅಧ್ಯಕ್ಷ ರತ್ನಾಕರ ಆಚಾರ್ಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೃಷ್ಣ ಮಡಿವಾಳ, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ದೇವದಾಸ ಶೆಟ್ಟಿ ಇದ್ದರು.
ಶಾಲಾ ಮುಖ್ಯ ಶಿಕ್ಷಕ ಸಂತೋಷ್ ಕುಮಾರ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು.
Comments are closed.