ಕರ್ನಾಟಕ

ಶಿವಮೊಗ್ಗದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹೋರಿ ತಿವಿದು ಇಬ್ಬರು ಮೃತ್ಯು

Pinterest LinkedIn Tumblr

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹೋರಿ ತಿವಿದು ಇಬ್ಬರು ಮೃತಪಟ್ಟ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅವಘಡಗಳಲ್ಲಿ ಈ ಅನಾಹುತ ಸಂಭವಿಸಿದೆ. ಶಿಕಾರಿಪುರ ತಾಲೂಕಿನ ಮಾಳೂರಿನಲ್ಲಿ ನಡೆದಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ರಂಗನಾಥ್‌ ಎಂಬವರು ಮೃತಪಟ್ಟಿದ್ದಾರೆ. ಸ್ಪರ್ಧೆ ನೋಡಲು ಹೋಗಿದ್ದಾಗ ಹೋರಿ ತಿವಿದು ಮೃತಪಟ್ಟಿದ್ದಾರೆ. ಅಲ್ಲದೆ ಮಾಳೂರಿನಲ್ಲಿ ಇನ್ನೂ ಇಬ್ಬರಿಗೆ ಗಾಯಗಳಾಗಿವೆ.

ಶಿವಮೊಗ್ಗ ತಾಲೂಕಿನ ಕೊನಗನವಳ್ಳಿ, ಶಿಕಾರಿಪುರ ತಾಲೂಕಿನ ಮಾಳೂರಿನಲ್ಲಿ ಅಲ್ಕೊಳ ನಿವಾಸಿ 32 ವರ್ಷದ ಲೋಕೇಶ್ ಮೃತಪಟ್ಟಿದ್ದಾರೆ. ಹೋರಿ ತಿವಿತದಿಂದ ಗಾಯಗೊಂಡಿದ್ದ ಆಟೋ ಚಾಲಕರಾಗಿದ್ದ ಲೋಕೇಶ್‌ ಆವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

 

Comments are closed.