ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಲಕ್ಷ್ಮಣ್ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು (ಜ.23) ಮುಂಜಾನೆ 4 ಗಂಟೆಯ ಸುಮಾರಿಗೆ ಬೆಂಗಳೂರಿನಲ್ಲಿ ಸ್ವಗೃಹದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಲಕ್ಷ್ಮಣ್ ಅವರಿಗೆ 74 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಹಾಗು ಮೂವರು ಮಕ್ಕಳನನ್ನು ಅಗಲಿದ್ದಾರೆ.
ಭಾನುವಾರ ರಾತ್ರಿ ಎದೆನೋವು ಕಾಣಿಸಿಕೊಂಡಿದ್ದು ಸೋಮವಾರ ಮುಂಜಾನೆ 3.30 ಸುಮಾರಿಗೆ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಇಸಿಜಿ ಮಾಡಿಸಿ ಮತ್ತೆ ಮನೆಗೆ ವಾಪಾಸ್ಸಾಗಿದ್ದು. ಮುಂಜಾನೆ ಹೃದಯಾಘಾತ ಸಂಭವಿಸಿದೆ. ಬೆಂಗಳೂರಿನ ಸ್ವಗೃಹದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ.
200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟನೆ: ಕನ್ನಡ ಶ್ರೇಷ್ಠ ನಟರಾದ ಡಾ.ರಾಜ್ ಕುಮಾರ್, ಡಾ.ವಿಷ್ಣುವರ್ಧನ್, ಟೈಗರ್ ಪ್ರಭಾಕರ್, ಶಂಕರ್ ನಾಗ್, ಅಂಬರೀಶ್, ರವಿಚಂದ್ರನ್, ಶಿವರಾಜ್ ಕುಮಾರ್, ಸುದೀಪ್ ಹೀಗೆ ಸ್ಟಾರ್ ನಟರ ಸಿನಿಮಾಗಳಲ್ಲಿ ನಟಿಸಿದ್ದಾರೆ. ಲಕ್ಷ್ಮಣ್ ಅವರು ಸುಮಾರು 200ಕ್ಕೂ ಅಧಿಕ ಸಿನಿಮಾಗಳಲ್ಲಿ ಲಕ್ಷ್ಮಣ್ ಬಣ್ಣ ಹಚ್ಚಿದ್ದು ಯಜಮಾನ, ಕರುಳಿನ ಕೂಗು, ಒಲವಿನ ಉಡುಗೊರೆ, ಸಾಂಗ್ಲಿಯಾನ, ಸೂರ್ಯವಂಶ ಹಿಟ್ ಚಿತ್ರಗಳಲ್ಲಿ ಅಭಿನಯಿಸಿದ್ದರು.
Comments are closed.