ಕರಾವಳಿ

ಶಂಕರನಾರಾಯಣದ ಅಕ್ರಮ ಮರಳುಗಾರಿಕೆ ಧಕ್ಕೆಗೆ ಗಣಿ‌ಇಲಾಖೆ ಅಧಿಕಾರಿಣಿ ದಾಳಿ; 2 ಟಿಪ್ಪರ್ ವಶ

Pinterest LinkedIn Tumblr

ಉಡುಪಿ: ಕುಂದಾಪುರ ತಾಲೂಕು ಶಂಕರನಾರಾಯಣ ವ್ಯಾಪ್ತಿಯ ಭರತ್ಕಲ್ ಎಂಬಲ್ಲಿ ವಾರಾಹಿ ನದಿಯಿಂದ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟ ನಡೆಯುತ್ತಿದ್ದಾಗ ಅಧಿಕಾರಿಣಿ ಸಂಧ್ಯಾ ಅವರು ದಾಳಿ ನಡೆಸಿದ್ದಾರೆ.

ಈ ಅಕ್ರಮ ಸಂಬಂಧಿಸಿದಂತೆ ಸಾರ್ವಜನಿಕರಿಂದ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ದೂರು ಬಂದ ಹಿನ್ನೆಲೆ, ಇಲಾಖೆಯ ಹಿರಿಯ ಭೂವಿಜ್ಞಾನಿ ಸಂದೀಪ್ ಜಿ.ಯು ಮಾರ್ಗದರ್ಶನದಲ್ಲಿ ಭೂವಿಜ್ಞಾನಿ ಸಂಧ್ಯಾ ಅವರು ಇಂದು (ಶುಕ್ರವಾರ) ಮುಂಜಾನೆ ಕಾರ್ಯಾಚರಣೆ ನಡೆಸಿ ಮರಳು ಧಕ್ಕೆಯಲ್ಲಿದ್ದ ಎರಡು ಲಾರಿಗಳನ್ನು ವಶಕ್ಕೆ ಪಡೆದರು.

ಈ ಬಗ್ಗೆ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ವಹಿಸುವವರೆಗೆ ಮರಳು ಸಾಗಾಣಿಕೆಗೆ ಬಳಸುತ್ತಿದ್ದ 2 ಲಾರಿ ಹಾಗೂ 5 ಮೆಟ್ರಿಕ್ ಟನ್ ಮರಳನ್ನು ಶಂಕರನಾರಾಯಣ ಪೊಲೀಸ್ ಠಾಣೆ ವಶಕ್ಕೆ ನೀಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಕಟಣೆ ತಿಳಿಸಿದೆ.

Comments are closed.