ಕರಾವಳಿ

ಹೋಳಿ ಮೆರವಣಿಗೆ : ಗಂಗೊಳ್ಳಿ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ

Pinterest LinkedIn Tumblr

ಉಡುಪಿ: ಕುಂದಾಪುರ ತಾಲೂಕು ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಂಕಣ ಖಾರ್ವಿ ಸಮಾಜದವರು ಹೋಳಿ ಹಬ್ಬ ಆಚರಣೆಯ ಪ್ರಯುಕ್ತ ಮೆರವಣಿಗೆ ನಡೆಯಲಿದ್ದು, ಈ ಸಂದರ್ಭದಲ್ಲಿ, ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶಿಸಲಾಗಿದೆ.

ಗಂಗೊಳ್ಳಿ, ಗುಜ್ಜಾಡಿ ಹಾಗೂ ತ್ರಾಸಿ ಗ್ರಾಮಗಳಲ್ಲಿ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು ಮಾರ್ಚ್ 8 ರ ಬೆಳಗ್ಗೆ 6 ರಿಂದ ರಾತ್ರಿ 12 ರ ವರೆಗೆ ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಈ ಮೇಲ್ಕಂಡ ಗ್ರಾಮಗಳ ವ್ಯಾಪ್ತಿಯಲ್ಲಿ ಒಣದಿನವೆಂದು ಘೋಷಿಸಿ, ಮದ್ಯ ಮಾರಾಟ ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.

 

 

Comments are closed.