ಕರ್ನಾಟಕ

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ನಿಧನ; ಪ್ರಜಾಧ್ವನಿ ಯಾತ್ರೆ ಸಹಿತ ಕಾಂಗ್ರೆಸ್‌ನ ಎಲ್ಲಾ ಕಾರ್ಯಕ್ರಮಗಳು ರದ್ದು

Pinterest LinkedIn Tumblr

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ನಿಧನದ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಶನಿವಾರ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆ ಸೇರಿದಂತೆ ಕಾಂಗ್ರೆಸ್‌ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

ರಾಮನಗರ ಹಾಗೂ ಹಾರೋಹಳ್ಳಿ ತಾಲ್ಲೂಕು ವ್ಯಾಪ್ತಿಯ ವಿವಿಧೆಡೆ ಸಮಾವೇಶಗಳ ಆಯೋಜನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತಿತರರು ಪಾಲ್ಗೊಳ್ಳಬೇಕಿತ್ತು. ಧ್ರುವನಾರಾಯಣ ಅವರ ಹಠಾತ್ ನಿಧನದ ಹಿನ್ನೆಲೆಯಲ್ಲಿ ಪ್ರಜಾ ಧ್ವನಿ ಯಾತ್ರೆ ರದ್ದಾಗಿದೆ.

ಇಂದು ಹಾಗೂ ನಾಳೆ ರಾಮನಗರ, ಹೊನ್ನಾಳಿ, ಹರಿಹರ, ರಾಣೆಬೆನ್ನೂರುಗಳಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯನ್ನು ಆಯೋಜಿಸಲಾಗಿತ್ತು. ಇದರಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮುಂತಾದ ನಾಯಕರು ಭಾಗವಹಿಸಬೇಕಿತ್ತು. ಧ್ರುವನಾರಾಯಣ ಅವರ ಸಾವಿಗೆ ಸಂತಾಪ ಸೂಚಕವಾಗಿ ಇದೀಗ ಈ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

ಚಾಮರಾಜನಗರದ ಸಂಸದರಾಗಿ ಎರಡು ಬಾರಿ, ಸಂತೇಮರಹಳ್ಳಿ ವಿಧಾನಸಭಾ ಕ್ಷೇತ್ರ ಮತ್ತು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಧ್ರುವನಾರಾಯಣ ಆಯ್ಕೆಯಾಗಿದ್ದರು.

Comments are closed.