ಕರ್ನಾಟಕ

8480 ಕೋಟಿ ರೂ. ವೆಚ್ಚದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Pinterest LinkedIn Tumblr

ಮಂಡ್ಯ: ಬೆಂಗಳೂರು- ಮೈಸೂರು ರಾಷ್ಟ್ರೀಯ ದಶಪಥ ರಸ್ತೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಡ್ಯ ತಾಲೂಕಿನ ಹನಕೆರೆ ಗ್ರಾಮದ ಬಳಿ 118 ಕಿ.ಮೀ. ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇಯನ್ನು ಪ್ರಧಾನಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಿದ್ದಾರೆ.

   

8,479 ಕೋಟಿ ರೂ. ವೆಚ್ಚದಲ್ಲಿ ಎಕ್ಸ್‌ಪ್ರೆಸ್‌ ಹೈವೇ ನಿರ್ಮಾಣವಾಗಿದೆ. ಪ್ರಧಾನಿ ಮೋದಿಯವರು ಕೇಂದ್ರ ಸಚಿವ ನಿತಿನ್ ಗಡ್ಕರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರೊಂದಿಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅಭಿವೃದ್ಧಿಯನ್ನು ಬಿಂಬಿಸುವ ಪ್ರದರ್ಶನವನ್ನು ವೀಕ್ಷಿಸಿದರು.

ಮಂಡ್ಯದ ಪ್ರವಾಸಿಮಂದಿರ (ಐಬಿ) ವೃತ್ತದಿಂದ ನಂದಾ ಸರ್ಕಲ್‌ವರೆಗೆ 1.8 ಕಿಲೋ ಮೀಟರ್ ರೋಡ್‌ಶೋ ನಡೆಸಿದ ಮೋದಿಯವರಿಗೆ ದಾರಿಯುದ್ಧಕ್ಕೂ ಅಭಿಮಾನಿಗಳು ಹೂವಿನ ಸುರಿಮಳೆಗೈದರು. ಮಾರ್ಗಮಧ್ಯೆ ಕಾರು ನಿಲ್ಲಿಸಿ ಮೋದಿ ಜನರತ್ತ ಕೈ ಬೀಸಿದರು. ತಮ್ಮಡೆಗೆ ಎಸೆದ ಹೂವುಗಳನ್ನು ಜನರತ್ತ ಎಸೆದು ಮೋದಿಯವರು ಖುಷಿಪಟ್ಟರು. ಹೆದ್ದಾರಿ ಉದ್ಘಾಟಿಸಿದ ಪ್ರಧಾನಿಯವರಿಗೆ ರೋಸ್ ವುಡ್ ನಲ್ಲಿ ಮಾಡಿದ ಹೆದ್ದಾರಿ ಪ್ರತಿಕೃತಿಯನ್ನು ಉಡುಗೊರೆಯಾಗಿ ನೀಡಲಾಯಿತು. ಸಂಸದ ಪ್ರತಾಪ ಸಿಂಹ ಪೇಟ ತೊಡಿಸಿ ಪ್ರಧಾನಿಯವರನ್ನು ಸನ್ಮಾನಿಸಿದರೆ, ಸಂಸದ ಸುಮಲತಾ ಮಂಡ್ಯದ ಅಚ್ಚುಬೆಲ್ಲವನ್ನು ಪ್ರಧಾನಿಯವರಿಗೆ ನೀಡಿದರು.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಯೋಜನೆಯು ರಾಷ್ಟ್ರೀಯ ಹೆದ್ದಾರಿ 275 ರ ಬೆಂಗಳೂರು-ನಿಡಘಟ್ಟ-ಮೈಸೂರು ವಿಭಾಗವನ್ನು 6 ಪಥದಲ್ಲಿ ಅಭಿವೃದ್ಧಿಪಡಿಸುವುದನ್ನು ಒಳಗೊಂಡಿದೆ. 118 ಕಿ.ಮೀ ಉದ್ದವನ್ನು ಹೊಂದಿದೆ. ಈ ಯೋಜನೆಯನ್ನು ಸುಮಾರು 8480 ಕೋಟಿ ರೂ.ಗಳ ಒಟ್ಟು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಇದು ಬೆಂಗಳೂರು- ಮೈಸೂರು ನಡುವೆ ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ. ಬೆಂಗಳೂರು ಮತ್ತು ಮೈಸೂರು ನಡುವೆ ಸುಮಾರು 3 ಗಂಟೆಗಳಿಂದ ಸುಮಾರು 75 ನಿಮಿಷಗಳವರೆಗೆ ಈ ಎಕ್ಸ್ ಪ್ರೆಸ್ ವೇ ಮೂಲಕ ತಲುಪಬಹುದಾಗಿದೆ.

Comments are closed.