ಕರಾವಳಿ

ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ನಾಗರಾಜ್ ರಾಯಪ್ಪನಮಠ, ಕಾರ್ಯದರ್ಶಿ ಗಣೇಶ್ ಬೀಜಾಡಿ

Pinterest LinkedIn Tumblr

ಕುಂದಾಪುರ: ಕರ್ನಾಟಕ ಕಾರ್ಯನಿರತ ಸಂಘ ಉಡುಪಿ‌ ಜಿಲ್ಲಾ ಸಂಘದ ಅಧೀನ ಸಂಸ್ಥೆಯಾದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ (ರಿ) ಇದರ ನೂತನ ತಾಲೂಕು ಅಧ್ಯಕ್ಷರಾಗಿ ನಾಗರಾಜ್ ರಾಯಪ್ಪನಮಠ ಹಾಗೂ ಕಾರ್ಯದರ್ಶಿಯಾಗಿ ಗಣೇಶ್ ಬೀಜಾಡಿ (ಐಶ್ವರ್ಯ ಬೀಜಾಡಿ) ಆಯ್ಕೆಯಾಗಿದ್ದಾರೆ.

ಮಂಗಳವಾರ ನಗರದ ಅಂಬೇಡ್ಕರ್ ಭವನದಲ್ಲಿ ಜರುಗಿದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ನಾಗರಾಜ ರಾಯಪ್ಪನಮಠ ಆಯ್ಕೆಯಾದರು.

ಕಾರ್ಯದರ್ಶಿಯಾಗಿ ಗಣೇಶ್ ಬೀಜಾಡಿ ಅವಿರೋಧವಾಗಿ ಆಯ್ಕೆಯಾದರು. ಉಳಿದಂತೆ ಉಪಾಧ್ಯಕ್ಷರಾಗಿ ಚಂದ್ರಮ ತಲ್ಲೂರು, ರಾಘವೇಂದ್ರ ಪೈ, ಜೊತೆ ಕಾರ್ಯದರ್ಶಿಗಳಾಗಿ ಯೋಗೀಶ್ ಕುಂಭಾಶಿ ಹಾಗೂ ರಾಘವೇಂದ್ರ ಬಳ್ಕೂರು, ಕೋಶಾಧಿಕಾರಿಯಾಗಿ ಲೋಕೇಶ್ ಆಚಾರ್ಯ, ಕಾರ್ಯಕಾರಿ‌ ಸಮಿತಿ ಸದಸ್ಯರಾಗಿ ಉದಯ ಕುಮಾರ್, ಶಶಿಧರ ಹೆಮ್ಮಾಡಿ, ಮಂಜುನಾಥ ಶೆಣೈ ಜನ್ನಾಡಿ, ಸತೀಶ್ ಆಚಾರ್ಯ ಉಳ್ಳೂರು, ವಿನಯ್ ಪಾಯಸ್, ರಾಮಕೃಷ್ಣ ಹೇರಳೆ, ಶ್ರೀಕಾಂತ ಹೆಮ್ಮಾಡಿ, ಸಂತೋಷ್ ಕುಂದೇಶ್ವರ ಆಯ್ಕೆಯಾಗಿದ್ದಾರೆ.

ಉಡುಪಿ ಜಿಲ್ಲಾ‌ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ರಾಜೇಶ್ ಶೆಟ್ಟಿ ಅಲೆವೂರು ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು.

ನಿರ್ಗಮಿತ ಅಧ್ಯಕ್ಷ ಶಶಿಧರ ಹೆಮ್ಮಾಡಿ ಅವರು ನೂತನ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಅವರಿಗೆ ಅಧಿಕಾರ ಹಸ್ತಾಂತರಿಸಿ, ಶುಭಹಾರೈಸಿದರು.

ಜಿಲ್ಲಾ ಸಂಘದ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಜಿಲ್ಲಾ ಸಂಘದ ರಜತ ಮಹೋತ್ಸವ ಸಮಿತಿ ಕಾರ್ಯದರ್ಶಿ ಜಯಕರ ಸುವರ್ಣ ಉಪಸ್ಥಿತರಿದ್ದರು.

Comments are closed.