ಕರಾವಳಿ

ಕುಂದಾಪುರದ ಸಂತೆ ಮಾರ್ಕೇಟ್ ಎದುರಿನ ಡಿವೈಡರ್ ಬಳಿ ಲಾರಿ ಡಿಕ್ಕಿಯಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿ

Pinterest LinkedIn Tumblr

(ವರದಿ- ಯೋಗೀಶ್ ಕುಂಭಾಸಿ)

ಕುಂದಾಪುರ: ಡಿಪೋದಿಂದ ಕುಂದಾಪುರದ ಕೆ.ಎಸ್.ಆರ್.ಟಿ.ಸಿ ಬಸ್ ತೆರಳುವ ವೇಳೆ ಡಿವೈಡರ್ ಬಳಿ ಲಾರಿಯೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸರಕಾರಿ ಬಸ್ಸು ಪಲ್ಟಿಯಾದ ಘಟನೆ ಗುರುವಾರ ಮುಂಜಾನೆ 5.15ರ ಹೊತ್ತಿಗೆ ಕುಂದಾಪುರದ ಸಂತೆ ಮಾರ್ಕೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಕುಂದಾಪುರದ ಬಸ್ರೂರು ಮೂರುಕೈ ಬಳಿಯ ಕೆ.ಎಸ್.ಆರ್.ಟಿ.ಸಿ ಡಿಪ್ಪೋದಿಂದ ಹೊರಟು ಬಸ್ ನಿಲ್ದಾಣಕ್ಕೆ ತೆರಳುವ ವೇಳೆ ಇಲ್ಲಿನ ಸಂತೆ ಮಾರುಕಟ್ಟೆ (ಹಳೆ ಆದರ್ಶ ಆಸ್ಪತ್ರೆ) ಎದುರಿನ ಡಿವೈಡರ್ನಲ್ಲಿ ಯೂ ಟರ್ನ್ ತೆಗೆದುಕೊಳ್ಳುವಾಗ ಉಡುಪಿ ಕಡೆಯಿಂದ ಬೈಂದೂರಿನತ್ತ ಸಾಗುತ್ತಿದ್ದ ಲಾರಿಯೊಂದು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿದ್ದು ಬಸ್ ಚಾಲಕ ಭಾಸ್ಕರ್‌ ಎನ್‌ ನಾಯ್ಕ್‌ ಎನ್ನುವರು ಗಾಯಗೊಂಡು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಲಾರಿ ಚಾಲಕ ಈರಪ್ಪ ಆರ್‌ ಹಡಗಲಿ ಎನ್ನುವರ ನಿರ್ಲಕ್ಷ್ಯ ಹಾಗೂ ಅತಿ ವೇಗದ ಚಾಲನೆ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಎರಡೂ ವಾಹನಗಳು ಜಖಂ ಗೊಂಡಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು ಕೆಲ ಕಾಲ ವಾಹನ ಸಂಚಾರ ಅಸ್ತವ್ಯಸ್ಥವಾಗಿತ್ತು. ಕುಂದಾಪುರ ಸಂಚಾರ ಪೊಲೀಸ್ ಠಾಣೆ ಪಿಎಸ್ಐ ನಾಸೀರ್‌ ಹುಸೇನ್‌ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಆರೋಪಿ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Comments are closed.