ಕರ್ನಾಟಕ

ಹಿಂದುತ್ವದ ಬಗ್ಗೆ ಅವಹೇಳನಕಾರಿ ಪೋಸ್ಟ್; ನಟ ಚೇತನ್ ಅಹಿಂಸಾ ಅರೆಸ್ಟ್, 14 ದಿನ ನ್ಯಾಯಾಂಗ ಬಂಧನ

Pinterest LinkedIn Tumblr

ಬೆಂಗಳೂರು: ಹಿಂದುತ್ವದ ಬಗ್ಗೆ ವಿವಾದಿತ ಟ್ವಿಟರ್‌ ಪೋಸ್ಟ್‌ ಪ್ರಕರಣದಲ್ಲಿ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರನ್ನು ಶೇಷಾದ್ರಿಪುರಂ ಪೊಲೀಸರು ಮಾ.21 ಮಂಗಳವಾರ ಬಂಧಿಸಿದ್ದಾರೆ.

ಚೇತನ್‌ ಅವರು ಹಿಂದೂಗಳ ಭಾವನೆಗೆ ಧಕ್ಕೆ ತರುವ ಪೋಸ್ಟ್ ಹಾಕಿದ್ದರು ಎಂದು ಹಿಂದೂಪರ ಕಾರ್ಯಕರ್ತ ಶಿವಕುಮಾರ್ ಎನ್ನುವವರು ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದು ಈ ಬಗ್ಗೆ ಪ್ರಕರಣ ದಾಖಲಾಗಿತ್ತು.

ಇಂದು ಬೆಳಿಗ್ಗೆ ಚೇತನ್ ಅವರನ್ನು ಬಂಧಿಸಿದ ಪೊಲೀಸರು ನಗರದ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದ್ದಾರೆ. ಕೋರ್ಟ್‌ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಎಫ್ಐಆರ್ ಉಲ್ಲೇಖ..
ನಟ ಚೇತನ್ ಅವರು ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ. ಜಾತಿ, ಜಾತಿಗಳ ನಡುವೆ ವೈಮನಸ್ಸು ಉಂಟು ಮಾಡಿ ಕೋಮುಗಲಭೆಗೆ ಪ್ರಚೋದನೆ ನೀಡಿದ್ದಾರೆ. ಸಮಾಜದ ಶಾಂತಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ್ದಾರೆ. ಇಂತಹ ಪ್ರಚೋದನಕಾರಿ ಹೇಳಿಕೆಯಿಂದ ವಿವಿಧ ಕೋಮುಗಳ ನಡುವೆ ಘರ್ಷಣೆಗೆ ಪ್ರೇರಣೆ ನೀಡಿರುವ ಚೇತನ್‌ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕು ಎಂದು ಶಿವಕುಮಾರ್ ನೀಡಿದ ದೂರಿನಂತೆ ಎಫ್‌ಐಆರ್‌ ದಾಖಲಾಗಿತ್ತು.

Comments are closed.