ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ, ಪ.ಜಾತಿ ಮತ್ತು ಪಂಗಡದ ಅಲೆಮಾರಿ ಅಭಿವೃಧ್ದಿ ನಿಗಮ ಹಾಗೂ ಚೇರ್ಕಾಡಿ ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಚೇರ್ಕಾಡಿಯ ಮೈತಗುಲಿಯಲ್ಲಿ , ಕಂಟೈನರ್ ಮನೆ ಉದ್ಘಾಟನೆ ಹಾಗೂ ಸವಲತ್ತು ವಿತರಣೆ ಕಾರ್ಯಕ್ರಮವನ್ನು, ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ಉದ್ಘಾಟಿಸಿದರು.
ನಂತರ ಮಾತನಾಡಿದ ಸಚಿವರು , ಬಡವರ್ಗದ ಜನತೆಗೆ ಇಂತಹ ಕಂಟೈನರ್ ಮನೆಗಳು ಅತ್ಯಂತ ಹೆಚ್ಚು ಪ್ರಯೋಜನಕಾರಿಯಾಗಿದ್ದು, ಈ ಮನೆ ನಿರ್ಮಾಣದ ವೆಚ್ಚವೂ ಸಹ ಕಡಿಮೆಯಾಗಲಿದ್ದು, 6 ಲಕ್ಷ ರೂ ವೆಚ್ಚದಲ್ಲಿ ಈ ಮನೆ ನಿರ್ಮಾಣಗೊಳ್ಳಲಿದ್ದು, ಅರ್ಹ ಬಡ ಜನತೆಯನ್ನು ಗುರುತಿಸಿ , ಇಲಾಖೆವತಿಯಿಂದ ಇಂತಹ ಮನೆಗಳನ್ನು ನಿರ್ಮಿಸಿಕೊಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಚೇರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಖಾ ಭಟ್, ಆರೂರು ಗ್ರಾ.ಪಂ. ಅಧ್ಯಕ್ಷೆ ಮಮತಾ ಶೆಟ್ಟಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ಬ್ರಹ್ಮಾವರ ತಹಸೀಲ್ದಾರ್ ರಾಜಶೇಖರ ಮೂರ್ತಿ , ಬ್ರಹ್ಮಾವರ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಇಬ್ರಾಹಿಂಪುರ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ರಮೇಶ್, ಮತ್ತಿತರರು ಉಪಸ್ಥಿತರಿದ್ದರು.
.
Comments are closed.