ಬೆಂಗಳೂರು: ಧನಂಜಯ್ ನಟನೆಯ 25ನೇ ಸಿನಿಮಾ `ಗುರುದೇವ್ ಹೊಯ್ಸಳ’ ಮಾರ್ಚ್ 30ರಂದು ತೆರೆ ಕಂಡಿದ್ದು ಬಾರೀ ಸದ್ದು ಮಾಡ್ತಿದೆ. ಇದೇ ಖುಷಿ ಸಂದರ್ಭದಲ್ಲಿ ಡಾಲಿಗೆ ವಿಶೇಷ ಉಡುಗೊರೆಯೊಂದು ಸಿಕ್ಕಿದ್ದು ಈ ಬಗ್ಗೆ ಡಾಲಿ ಸೋಷಿಯಲ್ ಮೀಡಿಯಾದಲ್ಲಿ ಖುಷಿ ಸುದ್ದಿ ಹೇಳಿಕೊಂಡಿದ್ದಾರೆ.
ಡಾಲಿ- ಅಮೃತಾ ನಟನೆಯ `ಗುರುದೇವ ಹೊಯ್ಸಳ’ ಸಿನಿಮಾ ಚಿತ್ರಮಂದಿರದಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರ ಸಕ್ಸಸ್‌ಫುಲ್ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ ಡಾಲಿಗೆ ಭರ್ಜರಿ ಗಿಫ್ಟ್ ಸಿಕ್ಕಿದೆ. ದುಬಾರಿ ಬೆಲೆಯ ಟೊಯೋಟಾ ವೆಲ್ಫೈರ್ ಕಾರನ್ನು ಚಿತ್ರದ ನಿರ್ಮಾಪಕರಾದ ಕಾರ್ತಿಕ್- ಯೋಗಿ ಡಾಲಿಗೆ ಉಡುಗೊರೆಯಾಗಿ ನೀಡಿದ್ದಾರೆ.
25ನೇ ಚಿತ್ರ ಮತ್ತು ನನ್ನ ವಿಶೇಷ ವ್ಯಕ್ತಿಗಳಿಂದ ವಿಶೇಷ ಉಡುಗೊರೆ. ಲವ್ ಯೂ ನಾವು ಒಟ್ಟಿಗೆ ಮಾಡಲಿರುವ ಹೆಚ್ಚು ಹೆಚ್ಚು ಕೆಲಸಗಳಿಗಾಗಿ ಚೀರ್ಸ್. ಇಂತಹ ಒಳ್ಳೆಯ ನೆನಪುಗಳಿಗೆ ಧನ್ಯವಾದಗಳು. ‘ನನ್ನ ನಿರ್ಮಾಪಕರ ಮತ್ತು ಅಭಿಮಾನಿಗಳ ಕೊಡುಗೆ’ ಎಂದು ಡಾಲಿ ಟ್ವೀಟ್ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.
ಡಾಲಿ ಧನಂಜಯ್ ಇದೀಗ ಕೋಟಿ ಕಾರಿನ ಒಡೆಯರಾಗಿದ್ದಾರೆ. ನಿರ್ಮಾಪಕರಾದ ಕಾರ್ತಿಕ್-ಡಾಲಿ ಉಡುಗೊರೆ ನೀಡಿರುವ ಕಾರಿಗೆ 1 ಕೋಟಿ ಬೆಲೆಯಿದೆ.
Comments are closed.