ಬೆಂಗಳೂರು: ನಟ ಸುದೀಪ್ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಎರಡು ಬೆದರಿಕೆ ಪತ್ರ ಬಂದಿದೆ ಎಂದು ವರದಿಯಾಗಿದೆ.
ಈ ಪತ್ರದಲ್ಲಿ ಕಿಚ್ಚ ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ. ಈ ಸಂಬಂಧ ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದು, ಪತ್ರದ ಮೂಲಕ್ಕಾಗಿ ಶೋಧ ನಡೆಯುತ್ತಿದೆ.
ಸುದೀಪ್ ಮ್ಯಾನೇಜರ್ ಮಂಜುನಾಥ್ ಅವರಿಗೆ ಈ ಪತ್ರ ಸಿಕ್ಕಿದೆ ಎನ್ನಲಾಗಿದ್ದು, ಈ ಪತ್ರದಲ್ಲಿ ಸುದೀಪ್ ಬಗ್ಗೆ ಕೆಟ್ಟ ಪದಗಳ ಬಳಕೆ ಆಗಿದೆ. ಸುದೀಪ್ ಅವರ ಖಾಸಗಿ ವಿಡಿಯೋ ವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುವ ಬೆದರಿಕೆ ಹಾಕಲಾಗಿದೆ. ಇದರಿಂದ ಸುದೀಪ್ಗೆ ಮಾನಸಿಕ ಕಿರುಕುಳ ಉಂಟಾಗಿದ್ದು, ನಟನ ಘನತೆಗೆ ಧಕ್ಕೆ ತರಲು ಮಾಡಿರುವ ಸಂಚು ಎಂದು ಮಂಜುನಾಥ್ ಅವರು ದೂರಿದ್ದಾರೆ.
ಪುಟ್ಟೇನಹಳ್ಳಿ ಪೊಲೀಸರು ಐಪಿಸಿ ಸೆಕ್ಷನ್ 506, 504 ಅಡಿಯಲ್ಲಿ ಕೇಸ್ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣವನ್ನು ಸಿಸಿಬಿಗೆ ವಹಿಸಲು ಹಿರಿಯ ಪೊಲೀಸ್ ಅಧಿಕಾರಿಗಳು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
Comments are closed.