ಉಡುಪಿ: ಕಾಂಗ್ರೆಸ್‌ನ ಮುಖಂಡ ಕಿಶನ್ ಹೆಗ್ಡೆ ಕೊಳ್ಕೆಬೈಲು ಇವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ತಕ್ಷಣ ಜವಾಬ್ದಾರಿ ವಹಿಸಿಕೊಂಡು ಕೆಪಿಸಿಸಿ ಮತ್ತು ಜಿಲ್ಲಾ ಕಾಂಗ್ರೆಸ್ ಮತ್ತು ಸ‍್ಥಳೀಯ ನಾಯಕರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಹಾಗೂ ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಉಡುಪಿ ಕಾಂಗ್ರೆಸ್‌ನ ಮುಖಂಡರಾಗಿರುವ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರು ಈ ಬಾರಿಯ ವಿಧಾನಸಭಾ ಚುನಾವಣೆಯ ಕುಂದಾಪುರ ಕ್ಷೇತ್ರದ ಟಿಕಟ್ ಆಕಾಂಕ್ಷಿ ಕೂಡಾ ಆಗಿದ್ದು ಅರ್ಜಿ ಕೂಡ ಸಲ್ಲಿಸಿದ್ದರು. ಕೊನೆಯ ಹಂತದಲ್ಲಿ ಅವರಿಗೆ ಟಿಕೆಟ್ ಕೂಡ ತಪ್ಪಿತ್ತು. ಆದರೂ ಚುನಾವಣೆ ಕಾರ್ಯದಲ್ಲಿ ಪ್ರಾಮಾಣಿಕವಾಗಿ ತೊಡಗಿಸಿಕೊಂಡು ಪಕ್ಷ ನಿಷ್ಟೆ ಮೆರೆದಿದ್ದರು.
Comments are closed.