ಬೆಂಗಳೂರು: ಖ್ಯಾತ ಕಿರುತೆರೆ ನಟ ಸಂಪತ್ ಜಯರಾಮ್ (35) ಅವರು ಆತ್ಮಹತ್ಯೆಗೆ ಶರಣಾದ ಘಟನೆ ಭಾನುವಾರ ಬೆಳಕಿಗೆ ಬಂದಿದೆ.
ಸ್ಯಾಂಡಲ್ವುಡ್ ಕೆಲವು ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಸಂಪತ್ ಜಯರಾಮ್ ಅವರು ನಟಿಸಿದ್ದರು. ಆದರೆ, ಇತ್ತೀಚೆಗೆ ಕೆಲ ದಿನಗಳಿಂದ ಸೂಕ್ತ ಅವಕಾಶ ಸಿಗಲಿಲ್ಲ ಎಂಬ ಚಿಂತೆ ಸಂಪತ್ ಅವರಲ್ಲಿ ಎದುರಾಗಿತ್ತು ಎಂದು ವರದಿಗಳು ತಿಳಿಸಿವೆ.
ಸಂಪತ್ ಅವರು ನೆಲಮಂಗಲದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಹೇಳಲಾಗುತ್ತಿದ್ದು, ಆತ್ಮಹತ್ಯೆಗೆ ಖಚಿತ ಮಾಹಿತಿಗಳು ತಿಳಿದುಬಂದಿಲ್ಲ.
ಸಂಪತ್ ರಾಜ್ ಅವರು ಅಗ್ನಿ ಸಾಕ್ಷಿ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು. ವೈವಾಹಿಕ ಜೀವನಕ್ಕೆ ಕಾಲಿಟ್ಟು ಕೇವಲ ಒಂದು ವರ್ಷವಾಗಿತ್ತು.
Comments are closed.