ಕರಾವಳಿ

ಬ್ರಹ್ಮಾವರ ಸಮೀಪದ ಯಡ್ತಾಡಿ ಬಳಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಬೈಕ್ ಸವಾರ ಮೃತ್ಯು

Pinterest LinkedIn Tumblr

ಉಡುಪಿ: ಸ್ಕೂಟರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಯಡ್ತಾಡಿ ಗ್ರಾಮದ ಮಹಾತ್ಮಾ ಗಾಂಧಿ ಪ್ರೌಢ ಶಾಲೆಯ ಹತ್ತಿರ ನಡೆದಿದೆ. ಹೈಕಾಡಿಯ ಮುಹಮ್ಮದ್ ಸಫ್ವಾನ್ ಎ.ಕೆ.(27) ಮೃತ ಯುವಕ.

ಸ್ಕೂಟರ್ ಸವಾರ ಭುಜಂಗ ಶೆಟ್ಟಿ(68) ಎಂಬವರು ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳಗ್ಗೆ 9:45ರ ಸುಮಾರಿಗೆ ಹಾಲಾಡಿ ಮಾರ್ಗವಾಗಿ ಸಾಯಿಬರಕಟ್ಟೆ ಕಡೆಯಿಂದ ಬ್ರಹ್ಮಾವರದ ಕಡೆಗೆ ಹೋಗುತ್ತಿದ್ದ ಬೈಕಿಗೆ ಬ್ರಹ್ಮಾವರ ಕಡೆಯಿಂದ ಸಾಯಿಬರ ಕಟ್ಟೆ ಕಡೆಗೆ ಬರುತ್ತಿದ್ದ ಸ್ಕೂಟರ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಬೈಕ್ ಮತ್ತು ಸ್ಕೂಟರ್ ಸವಾರಿಬ್ಬರೂ ವಾಹನಗಳ ಸಮೇತ ರಸ್ತೆಯ ಮೇಲೆ ಬಿದ್ದ ಗಾಯಗೊಂಡಿದ್ದು ಇವರಿಬ್ಬರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಮುಹಮ್ಮದ್ ಸಫ್ವಾನ್ ತಡರಾತ್ರಿ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದು ಬಂದಿದೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Comments are closed.