ಕರಾವಳಿ

ಕಾಂಗ್ರೆಸ್​ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ; ರಾಹುಲ್ ಗಾಂಧಿ ಘೋಷಣೆ

Pinterest LinkedIn Tumblr

ಮಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಸರ್ಕಾರಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸಲಾಗುವುದು ಎಂದು ರಾಹುಲ್ ಗಾಂಧಿ ಗುರುವಾರ ಘೋಷಣೆ ಮಾಡಿದರು.

ಮಂಗಳೂರಿನ ಅಡ್ಯಾರು ಬಳಿ ಕಾಂಗ್ರೆಸ್ ಪಕ್ಷದ ಬೃಹತ್‌ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಮಹಿಳೆಯರಿಗಾಗಿ ಮತ್ತೊಂದು ಯೋಜನೆ ಘೋಷಣೆ ಮಾಡಿದರು. ಇದು ಕಾಂಗ್ರೆಸ್ ಪಕ್ಷ ಚುನಾವಣೆ ಹಿನ್ನೆಲೆಯಲ್ಲಿ ಘೋಷಿಸಿದ ಐದನೇ ಗ್ಯಾರಂಟಿ ಆಗಿದೆ. ಪಕ್ಷ ಅಧಿಕಾರಕ್ಕೆ ಬಂದ ಮೊದಲ ದಿನವೇ ಐದೂ ಗ್ಯಾರಂಟಿಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದರು.

ಕಾಂಗ್ರೆಸ್ ಭರವಸೆ ಈಡೇರಿಸುವುದಿಲ್ಲವೆಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಆದರೆ, ನಾವು ಭರವಸೆ ಈಡೇರಿಸುತ್ತೇವೆ, ಇದನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ನಮ್ಮ ಭರವಸೆ ನಾವು ಈಡೇರಿಸುತ್ತೇವೆ. ಪ್ರಧಾನಿ ಮೋದಿ ಅವರೇ ಭರವಸೆಗಳನ್ನು ಈಡೇರಿಸಿಲ್ಲ. ಬಡವರು, ರೈತರು, ಯುವಕರಿಗೆ ನೀಡಿದ ಭರವಸೆಗಳನ್ನು ಅವರು ಈಡೇರಿಸಿಲ್ಲ. ಆದರೆ, ಉದ್ಯಮಿ ಅದಾನಿಗೆ ನೀಡಿದ ಎಲ್ಲಾ ಭರವಸೆ ಈಡೇರಿಸಿದ್ದಾರೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.

 

Comments are closed.