ಕರ್ನಾಟಕ

ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ 67 ವರ್ಷದ ‘ಬಲರಾಮ’ ಇನ್ನಿಲ್ಲ

Pinterest LinkedIn Tumblr

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ 67 ವರ್ಷ ಪ್ರಾಯದ ‘ಬಲರಾಮ’ ಹೆಸರಿನ ಆನೆ ಭಾನುವಾರ ಕೊನೆಯುಸಿರೆಳೆದ ಬಗ್ಗೆ ವರದಿಯಾಗಿದೆ.

ಕೆಲವು ದಿನಗಳಿಂದ ತೀವ್ರ ಅಸ್ವಸ್ಥಗೊಂಡ ಬಲರಾಮ ಆನೆಗೆ ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.

ಬಲರಾಮನ ಬಾಯಿಯಲ್ಲಿ ಹುಣ್ಣಾಗಿದ್ಧರಿಂದ ಆಹಾರ ಸೇವಿಸಲು ನೀರು‌ ಕುಡಿಯಲು ಆಗದೇ ತೀವ್ರ ಅಸ್ವಸ್ಥಗೊಂಡಿದ್ದ. ಬಲರಾಮನಿಗೆ ಕ್ಷಯ ಇರಬಹುದೆಂದು ವೈದ್ಯರು ಶಂಕಿಸಲಾಗಿದೆ. ವೈದ್ಯಕೀಯ ವರದಿ ಬಂದ ನಂತರವಷ್ಟೆ ಕಾಯಿಲೆ ಕುರಿತು ನಿಖರವಾಗಿ ತಿಳಿಯಲಿದೆ.

Comments are closed.