ಕರ್ನಾಟಕ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಆಯ್ಕೆ

Pinterest LinkedIn Tumblr

ಬೆಂಗಳೂರು: ಕರ್ನಾಟಕದ ನೂತನ ಸಿಎಂ ಆಯ್ಕೆ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನು ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಎ.ಎನ್.ಐ ಮೂಲಗಳು ತಿಳಿಸಿದೆ. ಆ ಮೂಲಕ ಸಿದ್ದರಾಮಯ್ಯ ಅವರು 2ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗುತ್ತಿದ್ದಾರೆ.

ಮೇ.18 ಗುರುವಾರ ಸಂಜೆ 7 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ ಎನ್ನಲಾಗಿದೆ.

ಮೇ.17ರ ಬುಧವಾರ ಮಧ್ಯರಾತ್ರಿವರೆಗೂ ನಡೆದ ಅಂತಿಮ ಸಬೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಸರ್ವಾನುಮತದ ನಿರ್ಣಯವನ್ನು ದೆಹಲಿಯಲ್ಲಿ ಪ್ರಕಟಿಸಿದ್ದಾರೆ. ಮೇ 20 ರ ಶನಿವಾರ ಮಧ್ಯಾಹ್ನ 12.30ಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ನಡೆಯಲಿದೆ ಎಂದು ಮಾಹಿತಿ ಲಭ್ಯವಾಗಿದೆ.

ಮುಖ್ಯಮಂತ್ರಿ ಯಾರು ಎನ್ನುವ ವಿಚಾರದಲ್ಲಿ ಬುಧವಾರ ಸಂಜೆ ತನಕವೂ ಬಹಳಷ್ಟು ಗೊಂದಲಗಳಿತ್ತು. ಈತನ್ಮದ್ಯೆ ಗುರುವಾರವೇ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ ಎಂದು ಕೂಡ ಹೇಳಲಾಗಿತ್ತು. ಆದರೆ ಬದಲಾದ ವಿದ್ಯಾಮಾನದಲ್ಲಿ ಸಿಎಂ ಆಯ್ಕೆ ನಡೆದಿದ್ದು ಇಂದು ಬೆಂಗಳೂರಿನಲ್ಲಿ ಪ್ರಕಟಿಸಿ ಶನಿವಾರ ಪ್ರಮಾಣ ವಚನ ಕಾರ್ಯಕ್ರಮ ನಡೆಸುವ ಬಗ್ಗೆ ಅಧೀಕೃತ ಮೂಲಗಳಿಂದ ತಿಳಿದುಬಂದಿದೆ.

 

Comments are closed.