ಕರಾವಳಿ

ಉಡುಪಿಯ ಮಾಜಿ ಶಾಸಕ ಯು.ಆರ್. ಸಭಾಪತಿ‌ ನಿಧನ

Pinterest LinkedIn Tumblr

ಉಡುಪಿ: ಉಡುಪಿ ಮಾಜಿ ಶಾಸಕ,‌ ಹಿರಿಯ ರಾಜಕಾರಣಿ ಯು.ಆರ್. ಸಭಾಪತಿ‌(71) ಇಂದು ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು ವಿಧಿವಶರಾದರು.

ಉಡುಪಿ ಬಡಗುಪೇಟೆ ನಿವಾಸಿಯಾಗಿದ್ದ ಅವರು ಜಿಲ್ಲೆಯ ರಾಜಕೀಯ ಕ್ಷೇತ್ರದಲ್ಲಿ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದರು.

1952 ರಲ್ಲಿ ಜನಿಸಿದ ಅವರು,1994 ರಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ(ಕೆಸಿಪಿ) ಚುನಾಯಿತರಾಗಿ ವಿಧಾನಸಭೆ ಪ್ರವೇಶಿಸಿದ್ದರು. ಅನಂತರ ಕೆಸಿಪಿ ಕಾಂಗ್ರೆಸ್ ನೊಂದಿಗೆ ವಿಲೀನಗೊಂಡಿತ್ತು. 1999ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಎಂಎಲ್ಎ ಆಗಿ ಮರು ಆಯ್ಕೆಯಾಗಿದ್ದರು. ಅನಂತರ ಜಿಲ್ಲೆಯ ರಾಜಕಾರಣದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ, ಎರಡು ಗಂಡು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

Comments are closed.