ಬೆಂಗಳೂರು: ಸಾರ್ವಜನಿಕರಿಗೆ ವಾಹನ ದಟ್ಟಣೆಯಿಂದಾಗುವ ಸಮಸ್ಯೆ ತಪ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವಾಹನ ಸಂಚಾರಕ್ಕೆ ನೀಡಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ “ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ”.
“ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ” ಎಂದಿದ್ದಾರೆ.
Comments are closed.