ಕುಂದಾಪುರ: ಸ್ನಾತಕೋತ್ತರ ಪದವಿ ಮುಗಿದರೂ ಉದ್ಯೋಗ ಸಿಗದ ಕಾರಣ ಖಿನ್ನತೆಗೆ ಒಳಗಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಾಲ್ತೋಡು ಗ್ರಾಮದ ಸೀಗೇಡಿ ನಿವಾಸಿ ಪ್ರಮೋದ ಶೆಟ್ಟಿ ಎಂಬವರ ಪುತ್ರಿ ಗೌತಮಿ (22) ಆತ್ಮಹತ್ಯೆಗೆ ಶರಣಾದ ಯುವತಿ.
ಗೌತಮಿ ಉಡುಪಿಯ ಖಾಸಗಿ ಕಾಲೇಜಿನಲ್ಲಿ ಎಂಕಾಮ್ ಮುಗಿಸಿ ಬ್ಯಾಂಕ್ ನೇಮಕಾತಿ ಪರೀಕ್ಷೆ ಹಾಗೂ ಇತರೆ ಕಂಪನಿ ನೇಮಕಾತಿಗೆ ಬರೆದಿದ್ದರೂ ಪ್ಲೇಸ್ ಮೆಂಟ್ ಸಿಕ್ಕಿರಲಿಲ್ಲ. ಗೌತಮಿ ಡೆತ್ ನೋಟ್ ಬರೆದಿಟ್ಟು ಮನೆಯ ಮೊದಲ ಮಹಡಿಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ.
ಆಕೆಯನ್ನು ನೇಣಿನ ಕುಣಿಕೆ ತೆಗೆದು ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದರೂ ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.