ಉಡುಪಿ: ಹೆಬ್ರಿ ಆಗುಂಬೆ ಘಾಟಿ ತಿರುವಿನಲ್ಲಿ ಬಸ್ ಮತ್ತು ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿ ದಾರುಣ ರೀತಿಯಲ್ಲಿ ಮೃತಪಟ್ಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಸಹಸವಾರೆ ಮೃತಪಟ್ಟಿದ್ದಾರೆ.
ಸಿವಿಲ್ ಎಂಜಿನಿಯರಿಂಗ್ ಮುಗಿಸಿ ಕಂಟ್ರಾಕ್ಟರ್ ಜತೆಗೆ ಕೆಲಸ ಮಾಡುತ್ತಿದ್ದ ಬಾರ್ಕೂರು ನಿವಾಸಿ ಶಶಾಂಕ್ (21) ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಸಹಸವಾರೆ ನಿರ್ಮಿತಾ(19) ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಶಶಾಂಕ್ ಮತ್ತು ನಿರ್ಮಿತಾ ಬೈಕಿನಲ್ಲಿ ತೀರ್ಥಹಳ್ಳಿ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದರು. ಖಾಸಗಿ ಬಸ್ ಮಂಗಳೂರಿನಿಂದ ಉಡುಪಿ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿತ್ತು.
ಇನ್ನು ಶಶಾಂಕ್ ಸಹಿತ ಒಂದೇ ಕುಟುಂಬದ 6 ಮಂದಿ ಮೂರು ಬೈಕ್‌ನಲ್ಲಿ ಭಾನುವಾರ ಬೆಳಗ್ಗೆ ಹೊರಟಿದ್ದರು. ಶಶಾಂಕ್ ಅವರ ಜತೆ ಹಿಂಬದಿ ಸವಾರರಾಗಿ ಅಕ್ಕನ ಮಗಳು ನಿರ್ಮಿತಾ ಕುಳಿತಿದ್ದರು. ಅವರು ದ್ವಿತೀಯ ಪಿಯುಸಿ ಮುಗಿಸಿ ಪದವಿ ಕಾಲೇಜಿಗೆ ಸೇರಿದ್ದರೆನ್ನಲಾಗಿದೆ.
Comments are closed.