ನವದೆಹಲಿ: ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು
ಅವರು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
‘ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ, ಎಫ್.ಸಿ.ಐ ಅಕ್ಕಿ ನೀಡುವ ವಿಚಾರದಲ್ಲಿ ಒಪ್ಪಿಗೆ ಪತ್ರವನ್ನು ನೀಡಿ ಮರುದಿನವೇ ಅಕ್ಕಿ ವಿತರಣೆಯನ್ನು ರಾಜ್ಯಗಳಿಗೆ ಸ್ಥಗಿತಗೊಳಿಸಿಗಿರುವ ವಿಚಾರವನ್ನು ಗಮನಕ್ಕೆ ತರಲಾಗಿದೆ. ಅಮಿತ್ ಶಾ ಅವರು ಸಂಬಂಧಪಟ್ಟ ಮಂತ್ರಿಗಳ ಜೊತೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದರು. ರಾಜ್ಯಕ್ಕೆ ಎರಡು ಐ.ಆರ್.ಪಿ ಬಟಾಲಿಯನ್ ಒದಗಿಸಿದ್ದು, ಇನ್ನೆರಡು ಬಟಾಲಿಯನ್ ಒದಗಿಸಬೇಕೆಂದು ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಕೇಂದ್ರದ ಇತ್ತೀಚಿನ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ. ಇದು ನೇರವಾಗಿ ಬಡವರ ಎರಡು ಹೊತ್ತಿನ ಊಟಕ್ಕೂ ತೊಂದರೆ ಕೊಡುತ್ತದೆ. ಆದ್ದರಿಂದ ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಕೊಡದಿರುವ ಧೋರಣೆ ಬದಲಾದರೆ ಒಳ್ಳೆಯದು ಎನ್ನುವ ಅಭಿಪ್ರಾಯವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದ್ದಾರೆ.
Comments are closed.