ಬೆಂಗಳೂರು: ನಗರದ ರೇಸ್ಕೋರ್ಸ್ ರಸ್ತೆಯ ನಿವಾಸದಲ್ಲಿ ಶುಕ್ರವಾರ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದರು.
ಮನೆಗೆ ಬಂದ ಡಿಕೆ ಶಿವಕುಮಾರ್ಗೆ ಬೊಮ್ಮಾಯಿಯವರು ಹೂ ಗುಚ್ಛ ನೀಡಿ ಸ್ವಾಗತಿಸಿದರು. ಇದಕ್ಕೆ ಪ್ರತಿಯಾಗಿ ಡಿಕೆ ಶಿವಕುಮಾರ್ ಕೂಡ ಬೊಮ್ಮಾಯಿಯವರಿಗೂ ಶಾಲು ಹೊದಿಸಿ, ಹೂ ಗುಚ್ಛ ನೀಡಿದರು. ಇನ್ನು ಈ ಹಿಂದೆ ಸಿಎಂ ಆಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕೆಲಸ ನಿರ್ವಹಿಸಿದ್ದ ಬಸವರಾಜ್ ಬೊಮ್ಮಾಯಿಯುವರಿಂದ ಬ್ರಾಂಡ್ ಬೆಂಗಳೂರು ಸಂಬಂಧ ಸಲಹೆಗಳನ್ನು ಪಡೆದರು ಎನ್ನಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಡಿ.ಕೆ ಶಿವಕುಮಾರ್, “ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಅವರ ನಿವಾಸದಲ್ಲಿ ಭೇಟಿಯಾಗಿ ಅವರ ಆತಿಥ್ಯ ಸ್ವೀಕರಿಸಿದೆ. ಈ ಹಿಂದೆ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿದ್ದ ಬೊಮ್ಮಾಯಿ ಅವರಿಂದ ಬ್ರಾಂಡ್ ಬೆಂಗಳೂರು ನಿರ್ಮಾಣದ ಉದ್ದೇಶದಿಂದ ಕೆಲವು ಸಲಹೆಗಳನ್ನು ಪಡೆದೆ” ಎಂದಿದ್ದಾರೆ.
Comments are closed.