ಉಡುಪಿ: ಕಳೆದೆರಡು ದಿನಗಳಿಂದ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆ ಸೋಮವಾರ ಬೈಂದೂರು ತಾಲೂಕಿನ ಶಾಲಾ ಮತ್ತು ಪಿಯು ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ರಜೆ ಘೋಷಿಸಿದ್ದಾರೆ.
(ಸಾಂದರ್ಭಿಕ ಚಿತ್ರ)
ಶುಕ್ರವಾರ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನಾವುಂದ, ಸಾಲ್ಬುಡ ಮೊದಲಾದೆಡೆ ನೆರೆ ಭೀತಿ ಹೆಚ್ಚಿದೆ. ಬಹಳಷ್ಟು ಕಡೆ ತಗ್ಗು ಪ್ರದೇಶಗಳು ಜಲಾವೃತವಾಗಿದೆ.
ನದಿ ಪಾತ್ರದ ಜನರು ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
Comments are closed.