ಕರಾವಳಿ

ನಿರಂತರ ಮಳೆ: ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಜುಲೈ-24 ಸೋಮವಾರ ರಜೆ: ಜಿಲ್ಲಾಧಿಕಾರಿ

Pinterest LinkedIn Tumblr

ಉಡುಪಿ: ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ನದಿ ,ಹಳ್ಳ ಕೊಳ್ಳಗಳಲ್ಲಿ ಹೆಚ್ಚಿನ ನೀರು ಹರಿವು ಹಾಗೂ ಹೆಚ್ಚು ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆಯ ವರದಿ ಇರುವ ಹಿನ್ನೆಲೆ ಜುಲೈ 24 ಸೋಮವಾರ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳ ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಅವರು ಆದೇಶಿಸಿದ್ದಾರೆ.

 

ಎರಡು ದಿನಗಳಿಂದ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ. ಈ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಡಿಸಿ ರಜೆ ಘೋಷಿಸಿ ಆದೇಶ ಮಾಡಿದ್ದಾರೆ.

Comments are closed.