ಕರಾವಳಿ

ಎಸ್.ಕೆ.ಪಿ.ಎ ಕುಂದಾಪುರ-ಬೈಂದೂರು ವಲಯದ ನೂತನ ಅಧ್ಯಕ್ಷರಾಗಿ ದಿವಾಕರ್ ಶೆಟ್ಟಿ ಉಪ್ಪುಂದ, ಕಾರ್ಯದರ್ಶಿ ದಿನೇಶ್ ರಾಯಪ್ಪನಮಠ ಅವಿರೋಧ ಆಯ್ಕೆ

Pinterest LinkedIn Tumblr

ಕುಂದಾಪುರ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ (ರಿ) ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕುಂದಾಪುರ-ಬೈಂದೂರು ವಲಯದ 29 ನೇ ವಾರ್ಷಿಕ ಮಹಾ ಸಭೆ ತೆಕ್ಕಟ್ಟೆಯ ಪ್ರೆಸಿಡೆಂಟ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷ ಹಾಗೂ ಕಾರ್ಯದರ್ಶಿ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಈ ಹಿಂದೆ ಸಂಘದ ಪದಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ ದಿವಾಕರ್ ಶೆಟ್ಟಿ ಉಪ್ಪುಂದ ಇವರನ್ನು ಅಧ್ಯಕ್ಷರಾಗಿ, ಹಾಗೂ ದಿನೇಶ್ ರಾಯಪ್ಪನಮಠ ಅವರನ್ನು ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

Comments are closed.