ಬೆಂಗಳೂರು: ಹಾಸನ ಲೋಕಸಭಾ ಸದಸ್ಯ, ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಆದೇಶಿಸಿದೆ ಎನ್ನಲಾಗಿದೆ.
ಚುನಾವಣಾ ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ವಕೀಲ ದೇವರಾಜೇಗೌಡ ಅವರು ಪ್ರಜ್ವಲ್ ರೇವಣ್ಣ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದರು.
ಇಂದು ಇದರ ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರ ನೇತೃತ್ವದ ಪೀಠ, ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದೆ.
ಅಲ್ಲದೆ ಅಕ್ರಮ ಎಸಗಿರುವುದರಿಂದ ತಮ್ಮನ್ನು ವಿಜೇತ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಕೋರಿದ್ದ ಪರಾಜಿತ ಅಭ್ಯರ್ಥಿ ಎ.ಮಂಜು ಅವರ ಮನವಿ ಪುರಸ್ಕರಿಸಲು ನ್ಯಾಯಾಲಯ ನಿರಾಕರಿಸಿದೆ ಎನ್ನಲಾಗಿದೆ.
Comments are closed.