ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಮೋವಾಡಿಯಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಸೆ.12ರಂದು ಗಂಗೊಳ್ಳಿ ಪೊಲೀಸ್ ಠಾಣೆಯ ಮೋವಾಡಿ ಪ್ರದೇಶದಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಬಗ್ಗೆ ದೂರುಗಳು ಬಂದ ಹಿನ್ನೆಲೆ ಅಕ್ರಮ ಮರಳು ಅಡ್ಡೆಯ ಮೇಲೆ ಗಂಗೊಳ್ಳಿ ಠಾಣೆ ಪಿಎಸ್ಐ ಹರೀಶ್ ಆರ್. ಹಾಗೂ ಸಿಬ್ಬಂದಿಗಳ ತಂಡ ಈ ದಾಳಿ ನಡೆಸಿದೆ.
ಕಾರ್ಯಾಚರಣೆಯಲ್ಲಿ ನಾಲ್ವರು ಉತ್ತರ ಪ್ರದೇಶದ ಕಾರ್ಮಿಕರು ಹಾಗೂ ಓರ್ವ ಸ್ಥಳೀಯ ಅಕ್ರಮ ದಕ್ಕೆ ನಡೆಸುತ್ತಿದ್ದ ಅಲ್ಟನ್ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
Comments are closed.