(ವರದಿ- ಯೋಗೀಶ್ ಕುಂಭಾಸಿ)
ಕುಂದಾಪುರ: ಪ್ರತಿ ವಿಚಾರದಲ್ಲಿ ಅವಕಾಶಗಳು ನಮಗಾಗಿ ಕಾಯುತ್ತಿರುತ್ತದೆ. ಸೋಲಾದಾಗ ಆತ್ಮವಿಶ್ವಾಸ ಕಳೆದುಕೊಳ್ಳಬಾರದು. ಸತತ ಪರಿಶ್ರಮ, ಪ್ರಯತ್ನಗಳ ಮೂಲಕ ಗೆಲುವು ಸಿಗುತ್ತದೆ ಎಂದು ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್ ಅಭಿಪ್ರಾಯಪಟ್ಟರು.
ಜಿಲ್ಲಾ ಪಂಚಾಯತ್ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರದ ಗಾಂಧಿ ಮೈದಾನದಲ್ಲಿ ಮಂಗಳವಾರ ಜರುಗಿದ ಕುಂದಾಪುರ ಮತ್ತು ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕುಂದಾಪುರದ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ಮಾತನಾಡಿದರು. ಪುರಸಭೆ ಮುಖ್ಯಾಧಿಕಾರಿ ಮಂಜುನಾಥ, ಸದಸ್ಯ ಸಂತೋಷ್ ಶೆಟ್ಟಿ, ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಬೈಂದೂರು ಯುವ ಸಬಲೀಕರಣ, ಕ್ರೀಡಾ ಇಲಾಖೆಯ ಸಹಾಯಕ ಅಧಿಕಾರಿ ಪ್ರಭಾಕರ್ ಇದ್ದರು.
ಕುಂದಾಪುರ ಯುವ ಸಬಲೀಕರಣ, ಕ್ರೀಡಾ ಇಲಾಖೆಯ ಸಹಾಯಕ ಅಧಿಕಾರಿ ಕುಸುಮಾಕರ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ ಬೀಜಾಡಿ ನಿರೂಪಿಸಿದರು.
Comments are closed.