ಕರಾವಳಿ

ಉದ್ಯಮಿಗೆ ಬೈಂದೂರು ಬಿಜೆಪಿ ಟಿಕೆಟ್ ಕೊಡಿಸುವುದಾಗಿ 5 ಕೋಟಿ ವಂಚನೆ ಆರೋಪ: ಚೈತ್ರಾ ಕುಂದಾಪುರ ಸಹಿತ 6 ಮಂದಿ 10 ದಿನ ಸಿಸಿಬಿ ಕಸ್ಟಡಿಗೆ

Pinterest LinkedIn Tumblr

ಬೆಂಗಳೂರು: ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ನೀಡುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಎನ್ನುವರಿಗೆ ಕೋಟ್ಯಂತರ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದ‌ ಆರೋಪದಲ್ಲಿ ಬಂಧಿಸಲಾದ ಹಿಂದೂ ಪರ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸಹಿತ ಆರು ಮಂದಿ ಆರೋಪಿಗಳನ್ನು ಸೆಪ್ಟೆಂಬರ್ 23ರವರೆಗೆ ಸಿಸಿಬಿ ಕಸ್ಟಡಿಗೆ ಆದೇಶಿಸಲಾಗಿದೆ.

ಉಡುಪಿ ಕುಂದಾಪುರ ಮೂಲದ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ, ಗಗನ್ ಕಡೂರು, ಶ್ರೀಕಾಂತ್, ರಮೇಶ್, ಪ್ರಜ್ವಲ್, ಧನರಾಜ್ ಎನ್ನುವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು ಬುಧವಾರ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್​ ಗೆ ಹಾಜರುಪಡಿಸಿದ್ದರು.

ಈ ವೇಳೆ ಆರೋಪಿಗಳನ್ನು 14 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದು ಕೋರ್ಟ್ ಆರು ಮಂದಿ ಆರೋಪಿಗಳಿಗೂ 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿದೆ.

ಆರೋಪಿಗಳು ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

Comments are closed.