ಕರಾವಳಿ

ಮೇಲ್ಕಟ್ಕೆರೆ ಶಾಲೆಗೆ ಕೋಟೇಶ್ವರದ ಎಲ್.ಜಿ. ಇಂಡಸ್ಟ್ರೀಸ್ ಸನ್ ರೈಸ್ ವತಿಯಿಂದ ಬಟ್ಟಲುಗಳು, ಸ್ಟೀಲ್ ಸ್ಟಾಂಡ್ ಹಸ್ತಾಂತರ

Pinterest LinkedIn Tumblr

ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇಲ್ಕಟ್ಕೆರೆ ಇಲ್ಲಿನ ವಿದ್ಯಾರ್ಥಿಗಳಿಗೆ ಅಕ್ಷರ ದಾಸೋಹ ಕಾರ್ಯಕ್ರಮಕ್ಕೆ ಪೂರಕವಾಗಿ ಸ್ಥಳೀಯ ಸಂಸ್ಥೆ ಕೋಟೇಶ್ವರದ ಎಲ್.ಜಿ. ಇಂಡಸ್ಟ್ರೀಸ್ ಸನ್ ರೈಸ್ ವತಿಯಿಂದ ಮಾಲಕರಾದ ಹರ್ಷಾ ಕಾಮತ್ ಅವರು ಕೊಡುಗೆಯಾಗಿ ನೀಡಿದ ಬಟ್ಟಲುಗಳು ಹಾಗೂ ಬಟ್ಟಲು ಶೇಖರಣೆ ಮಾಡುವ ಸ್ಟೀಲ್ ಸ್ಟಾಂಡ್ ಹಸ್ತಾಂತರ ಕಾರ್ಯಕ್ರಮ ಶಾಲೆಯಲ್ಲಿ ಜರುಗಿತು.

ಈ ಒಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ರಾಜಶೇಖರ್ ವಹಿಸಿದ್ದರು. ಈ ಸಂದರ್ಭದಲ್ಲಿ ಸನ್ ರೈಸ್ ಸಂಸ್ಥೆಯ ಮ್ಯಾನೇಜರ್ ಅಶೋಕ್ ಹಾಗೂ ಸಿಬ್ಬಂದಿಗಳು, ಶಾಲಾ ಶಿಕ್ಷಕರಾದ ಜಯಪ್ಪ, ಚಂದ್ರಾವತಿ, ನೀತಾ, ಶೈಲಜಾ ಹಾಗೂ ಎಸ್.ಡಿ.ಎಂ.ಸಿ ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ಮುಖ್ಯಶಿಕ್ಷಕಿ ಜಯಂತಿ ಸ್ವಾಗತಿಸಿ, ಸಹ ಶಿಕ್ಷಕಿ ಸರಸ್ವತಿ ವಂದಿಸಿದರು. ಶಿಕ್ಷಕರಾದ ಗಣೇಶ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಸನ್ ರೈಸ್ ಸಂಸ್ಥೆ ವತಿಯಿಂದ ವಿದ್ಯಾರ್ಥಿಗಳಿಗೆ, ಪೋಷಕರಿಗೆ, ಶಿಕ್ಷಕರಿಗೆ ವಿಶೇಷ ಭೋಜನ ವ್ಯವಸ್ಥೆ ಮಾಡಲಾಯಿತು.

Comments are closed.