ಬೆಂಗಳೂರು: ಉದ್ಯಮಿ ಗೋವಿಂದ ಬಾಬು ಪೂಜಾರಿ ಎನ್ನುವರಿಗೆ ಬಿಜೆಪಿ ಟಿಕೆಟ್ ವಿಚಾರದಲ್ಲಿ 5 ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿ ಅಭಿನವ ಹಾಲಶ್ರೀಯನ್ನು ಸೆ.29ರವರೆಗೆ 10 ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿ ಬೆಂಗಳೂರಿನ 19ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.
ಒಡಿಶಾದ ಕಟಕ್ ಗೆ ಹೋಗಿದ್ದ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲವೀರಪ್ಪ ಸ್ವಾಮೀಜಿಯನ್ನು ಅಲ್ಲಿನ ಸ್ಥಳೀಯ ಪೊಲೀಸರ ನೆರವಿನಿಂದ ಮಂಗಳವಾರ ಬಂಧಿಸಿದ್ದ ಸಿಸಿಬಿ ಪೊಲೀಸರು ಕೆಂಪೇಗೌಡ ಏರ್ ಪೋರ್ಟ್ ಮೂಲಕ ನಗರಕ್ಕೆ ಕರೆತಂದಿದ್ದರು.
ಬೆಂಗಳೂರಿನ 19ನೇ ಎಸಿಎಂಎಂ ನ್ಯಾಯಾಲಯಕ್ಕೆ ಬುಧವಾರ ಹಾಲಶ್ರೀಯನ್ನು ಹಾಜರುಪಡಿಸಲಾಗಿತ್ತು. ಹಾಲಶ್ರೀ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಕಾಯ್ದಿರಿಸಿದೆ.
Comments are closed.