ಕರ್ನಾಟಕ

ಕಾವೇರಿ ನೀರಿಗಾಗಿ ಬೆಂಗಳೂರು ಬಂದ್: ವ್ಯಾಪಾರ- ವಹಿವಾಟು ಸ್ತಬ್ಧ, ಬಣಗುಡುತ್ತಿರುವ ರಸ್ತೆಗಳು..!

Pinterest LinkedIn Tumblr

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಇಂದು (ಸೆ.26 ಮಂಗಳವಾರ) ಬೆಂಗಳೂರು ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೂ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ವ್ಯಾಪಾರ ವಹಿವಾಟು ಬಹುತೇಕ ಸ್ಥಗಿತಗೊಂಡಿದೆ.

ಶಾಪಿಂಗ್ ಮಾಲ್ ಗಳು ಬಂದ್ ಆಗಿದ್ದು, ಅವುಗಳ ಮುಂದೆ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ವಾಹನಗಳ ದಟ್ಟಣೆಯಿಂದ ತುಂಬಿರುತ್ತಿದ್ದ ರಸ್ತೆಗಳು ಬಣಗುಡುತ್ತಿವೆ, ಸದಾ ಗಿಜಿಗುಡುತ್ತಿದ್ದ ಪ್ರಮುಖ ಸ್ಥಳಗಳು, ರಸ್ತೆಗಳಲ್ಲಿ ಜನರ ಸಂಚಾರ ವಿರಳವಾಗಿದೆ.

ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ಬಸ್ ಗಳ ಸಂಚಾರವಿದ್ದರೂ ಪ್ರಯಾಣಿಕರಿಲ್ಲದೆ ಜನದಟ್ಟಣೆ ಪ್ರದೇಶಗಳಾದ ಮೆಜೆಸ್ಟಿಕ್, ಕೆಆರ್ ಮಾರ್ಕೆಟ್ ಮತ್ತಿತರ ಕಡೆಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ತೀರಾ ವಿರಳವಾಗಿದೆ. ಬಂದ್ ನಿಂದಾಗಿ ರಾಜ್ಯದಲ್ಲಿ ಜನದಟ್ಟಣೆಯ ಬಸ್ ನಿಲ್ದಾಣಗಳಲ್ಲಿ ಒಂದಾದ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಕಡಿಮೆ ಸಂಖ್ಯೆಯಲ್ಲಿದ್ದಾರೆ.

Comments are closed.