ಕರ್ನಾಟಕ

ಪಿಎಸ್ಐ ನೇಮಕಾತಿ ಹಗರಣ: ಐಪಿಎಸ್ ಅಧಿಕಾರಿ ಅಮೃತ್ ಪೌಲ್​ಗೆ ವರ್ಷದ ಬಳಿಕ ಷರತ್ತು ಬದ್ದ ಜಾಮೀನು

Pinterest LinkedIn Tumblr

ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣದಲ್ಲಿ ಪ್ರಮುಖ ಆರೋಪಿಯಾಗಿ ಜೈಲು ಸೇರಿದ್ದ ಐಪಿಎಸ್ ಅಧಿಕಾರಿ ಅಮೃತ್ ಪೌಲ್‌ಗೆ ಸೋಮವಾರ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು ಒಮಧು ವರ್ಷಗಳ ಬಳಿಕ ಜಾಮೀನು ಸಿಕ್ಕಂತಾಗಿದೆ.

ಈ ಕುರಿತಂತೆ ಕಾಯ್ದಿರಿಸಿದ ಆದೇಶವನ್ನು ಕಲಬುರಗಿ ನ್ಯಾಯಪೀಠದಲ್ಲಿರುವ ನ್ಯಾಯಮೂರ್ತಿ ಪಿ.ಎಂ. ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿದೆ. ತನಿಖೆಗೆ ಸಹಕರಿಸಬೇಕು, ಅನುಮತಿ ಇಲ್ಲದೇ ವಿದೇಶಕ್ಕೆ ಹೋಗುವಂತಿಲ್ಲ ಎಂದು ಒಂದಷ್ಟು ಷರತ್ತುಗಳನ್ನು ಹಾಕಲಾಗಿದೆ.

ಕಳೆದ ಬಿಜೆಪಿ ಸರ್ಕಾರದಲ್ಲಿ ನಡೆದಿದ್ದ 545 ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್ (ಪಿಎಸ್ಐ) ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಅಮೃತ್ ಪೌಲ್‌ ಮಾರ್ಚ್‌ನಲ್ಲಿ ಜೈಲು ಸೇರಿದ್ದರು. ಅವರ ಮೇಲೆ ಆರೋಪ ಕೇಳಿ ಬಂದ ತಕ್ಷಣ ಆಗಿನ ಸರ್ಕಾರ ಅವರನ್ನು ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಿತ್ತು. ನೇಮಕಾತಿ ಅಕ್ರಮದ ಸಮಯದಲ್ಲಿ ಅವರು ರಾಜ್ಯ ಪೊಲೀಸ್ ಇಲಾಖೆಯ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದರು.

ಹಗರಣದಲ್ಲಿ ಪೊಲೀಸ್ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಸೇರಿದಂತೆ ಹಲವು ನೌಕರರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಅವರೆಲ್ಲರ ವಿಚಾರಣೆಯಿಂದ ಅಮೃತ್ ಪೌಲ್ ಸಹ ಅಕ್ರಮದಲ್ಲಿ ಭಾಗಿಯಾಗಿದ್ದು ಮೇಲ್ನೋಟಕ್ಕೆ ಕಂಡುಬಂದಿತ್ತು.

ಎಡಿಜಿಪಿಯಾಗಿ ಜೈಲು ಸೇರಿದ ಕರ್ನಾಟಕದ ಮೊದಲ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಎಂಬ ಕುಖ್ಯಾತಿ ಪಡೆದಿದ್ದರು.

Comments are closed.