ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ಭೀಕರ ಅಪಘಾತಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ರಸ್ತೆ ಬದಿ ನಿಂತಿದ್ದ ಕೆಎಸ್ಆರ್ಟಿಸಿ ಬಸ್ಗೆ ಹಾಸನ ಕಡೆಯಿಂದ ಬಂದ ಮಾರುತಿ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಕಾರಿನಲ್ಲಿದ್ದ ಓರ್ವ ಮಹಿಳೆ, ಮೂವರು ಪುರುಷರು ಸೇರಿ ನಾಲ್ವರ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಬೆಳ್ಳೂರು ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆ ಎದುರು ಮುಂಭಾಗ ರಸ್ತೆ ಬದಿ ನಿಂತಿದ್ದ ಕೆಎಸ್ಆರ್ಟಿಸಿ ಬಸ್ ಹಿಂಬದಿಗೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂದಿನ ಅರ್ಧ ಭಾಗ ಬಸ್ನೊಳಗೆ ಹೊಕ್ಕಿದೆ. ಸ್ಥಳಕ್ಕೆ ಬೆಳ್ಳೂರು ಪೊಲೀಸರ ಭೇಟಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ. ಹೆಚ್ಚಿನ ವಿವರ ಇನ್ನಷ್ಟೆ ತಿಳಿದುಬರಬೇಕಿದೆ.
Comments are closed.