ಕರಾವಳಿ

ಕುಂದಾಪುರದ ಬನ್ಸ್ ರಾಘು ಕೊಲೆ ಪ್ರಕರಣ: ಆರೋಪಿಗೆ ಮುಂದುವರಿದ ಶೋಧ, ವಿವಿಧ ಆಯಾಮಗಳಲ್ಲಿ ತನಿಖೆ ಚುರುಕು

Pinterest LinkedIn Tumblr

ಕುಂದಾಪುರ: ಕುಂದಾಪುರ ನಗರದ ಚಿಕ್ಕನ್‌ಸಾಲ್‌ ರಸ್ತೆಯ ಅಂಚೆ ಕಚೇರಿ ಸಮೀಪದ ಡೆಲ್ಲಿ ಬಜಾರ್‌ ಬಳಿ ರವಿವಾರ ಸಂಜೆ ಚೂರಿ ಇರಿದು ಕುಂದಾಪುರದ ನಿವಾಸಿ ರಾಘವೇಂದ್ರ ಶೇರುಗಾರ್‌ (42) ಅಲಿಯಾಸ್ ಬನ್ಸ್ ರಾಘು ಎನ್ನುವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ.

ರವಿವಾರ ಸಂಜೆ ಕೃತ್ಯ ನಡೆದ ತಕ್ಷಣವೇ ಪೊಲೀಸ್ ಇಲಾಖೆ ಆರೋಪಿ ಬಂಧನಕ್ಕೆ ಕಾರ್ಯಪ್ರವೃತ್ತರಾಗಿದ್ದು ತದನಂತರ ಉಡುಪಿ ಎಸ್ಪಿ ಡಾ. ಅರುಣ್ ಕೆ. ಅವರು ಮೂರು ವಿಶೇಷ ತನಿಖಾ ತಂಡ ರಚಿಸಿದ್ದರು.

ಪೊಲೀಸರ ತಂಡಗಳು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದು ಸಿಸಿ ಟಿವಿ ದೃಶ್ಯಾವಳಿ ಸಹಿತ ಅಗತ್ಯ ದಾಖಲೆಗಳನ್ನು ಪರಿಶೀಲಿಸಿದ್ದು ಪ್ರತ್ಯಕ್ಷದರ್ಶಿಗಳಿಂದ ಮಾಹಿತಿ ಕಲೆಹಾಕಿದ್ದಾರೆ ಎನ್ನಲಾಗಿದೆ. ಇನ್ನೊಂದು ತಂಡ ಆರೋಪಿ ಜಾಡು ಹಿಡಿದಿದ್ದು ಬಂಧನಕ್ಕೆ ಬಲೆ ಬೀಸಿದ್ದಾರೆ ಎಂದು ತಿಳಿದುಬಂದಿದೆ.

Comments are closed.