ಕರಾವಳಿ

ಹಮಾಸ್ ಉಗ್ರರಿಗೆ ಬೆಂಬಲ ನೀಡಿ ವಿಡಿಯೋ ಹರಿಬಿಟ್ಟಿದ್ದ ಮಂಗಳೂರು ಮೂಲದ ಜಾಕೀರ್ ಪೊಲೀಸರ ವಶಕ್ಕೆ

Pinterest LinkedIn Tumblr

ಮಂಗಳೂರು: ಇಸ್ರೇಲ್​ ಮತ್ತು ಪ್ಯಾಲೆಸ್ತೀನ್​ನ ಹಮಾಸ್ ​ಉಗ್ರರ ನಡುವಿನ ಯುದ್ಧಕ್ಕೆ ಸಂಬಂಧಿಸಿದಂತೆ ಹಮಾಸ್ ಉಗ್ರರನ್ನು ಬೆಂಬಲಿಸಿ ವೀಡಿಯೋ ಹರಿಬಿಟ್ಟಿದ್ದ ಮಂಗಳೂರಿನ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರಿನ ಬಂದರು ನಿವಾಸಿ ಜಾಕಿರ್ ಯಾನೆ ಜಾಕಿ ಬಂಧಿತ ಆರೋಪಿ. ಹಮಾಸ್ ಉಗ್ರರನ್ನು ಬೆಂಬಲಿಸಿ, ಪ್ಯಾಲೇಸ್ಟೈನ್, ಗಾಜಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲು ಪ್ರಾರ್ಥಿಸುವಂತೆ ಕರೆ ನೀಡಿ ಜಾಕಿರ್ ವೀಡಿಯೋ ಹರಿಬಿಟ್ಟಿದ್ದ. ಈತನ ವಿವಾದಾತ್ಮಕ ಹೇಳಿಕೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದಂತೆ ಎಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಈ ಕೃತ್ಯದ ಬಗ್ಗೆ ಸಮಾಜದಲ್ಲಿ ಕೋಮುಸೌಹಾರ್ದತೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದರಿಂದ ಈ ಕೃತ್ಯಕ್ಕೆ ಸಂಬಂಧಿಸಿದಂತೆ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ವಿನಾಯಕ ತೋರಗಲ್ ಅವರು ಸ್ವಯಂ ದೂರು ದಾಖಲಿಸಿ ಆರೋಪಿ ಜಾಕಿರ್ ಯಾನೆ ಜಾಕಿ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಆರೋಪಿ ಜಾಕೀರ್ ಮೇಲೆ ಈ ಹಿಂದೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಸುಮಾರು 7 ಪ್ರಕರಣಗಳು ದಾಖಲಾಗಿದೆ ಎಂದು ತಿಳಿದು ಬಂದಿದೆ.

Comments are closed.