ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಅವರನ್ನು ಬಂಧಿಸಲಾಗಿದೆ.
ಹುಲಿ ಉಗುರು ಇರುವ ಪೆಂಡೆಂಟ್ ಧರಿಸಿದ್ದರು ಎಂಬ ಆರೋಪ ಮೇಲೆ ವರ್ತೂರು ಸಂತೋಷ್ ಬಂಧನವಾಗಿದೆ ಎನ್ನಲಾಗಿದೆ. ಬಿಗ್ ಬಾಸ್ ಮನೆಯಿಂದ ಹೊರ ಕರೆತಂದು ಅರೆಸ್ಟ್ ಮಾಡಲಾಗಿದೆ. ರಾಮೋಹಳ್ಳಿ ಅರಣ್ಯಾಧಿಕಾರಿಗಳಿಂದ ವರ್ತೂರು ಸಂತೋಷ್ ಬಂಧನವಾಗಿದ್ದು, ಸದ್ಯ ರಾಮೋಹಳ್ಳಿ ಅರಣ್ಯಾಧಿಕಾರಿಗಳ ಕಸ್ಟಡಿಯಲ್ಲಿದ್ದಾರೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿಯನ್ನು ಅರೆಸ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಲಾಕೆಟ್ ಹಾಕಿಕೊಂಡಿದ್ದರು. ಈ ಕುರಿತು ಎಫ್ಐಆರ್ ದಾಖಲಾಗಿತ್ತು. ವೈಲ್ಡ್ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿ ಬಂಧನವಾಗಿದೆ ಈ ಹಿನ್ನೆಲೆ ವರ್ತೂರು ಸಂತೋಷ್ ಅವರನ್ನು ಬಂಧಿಸಿರುವ ಅರಣ್ಯಾಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ವರ್ತೂರು ಸಂತೋಷ್ ಅವರು ಹಲವು ಪ್ರಾಣಿಗಳನ್ನು ಸಾಕಿದ್ದಾರೆ. ಹಳ್ಳಿಕಾರ್ ಕ್ಯಾಟಲ್ ಬ್ರೀಡ್ನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಇದಲ್ಲದೆ ಅಖಿಲ ಭಾರತ ಹಳ್ಳಿಕಾರ್ ತಳಿ ಸಂರಕ್ಷಣಾ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಸಂತೋಷ್ ಅವರು ಕತ್ತಿಗೆ ಒಂದು ಚೈನ್ ಹಾಕಿದ್ದರು. ಇದರಲ್ಲಿ ಹುಲಿಯ ಉಗುರು ಕಾಣಿಸಿದೆ. ಈ ಕಾರಣದಿಂದಲೇ ಅವರನ್ನು ಅರೆಸ್ಟ್ ಮಾಡಲಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
Comments are closed.