ಹೊಸದಿಲ್ಲಿ: ಬಹಳಷ್ಟು ಚರ್ಚೆಗೆ ಗ್ರಾಸವಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶಿಕಾರಿಪುರ ಶಾಸಕ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ನಳಿನ್ ಕುಮಾರ್ ಕಟೀಲ್ ಅವರ ಅಧಿಕಾರಾವಧಿ ಮುಗಿದರೂ ಈ ಸ್ಥಾನಕ್ಕೆ ನೂತನ ಅಧ್ಯಕ್ಷರ ಆಗಿರಲಿಲ್ಲ.
ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೋಭಾ ಕರಾಂದ್ಲಾಜೆ, ವಿ.ಸೋಮಣ್ಣ, ಸಿ.ಟಿ ರವಿ, ಆರ್.ಅಶೋಕ್ ಮೊದಲಾದವರ ಹೆಸರು ಕೇಳಿಬಂದಿತ್ತು. ಆದರೆ ಕೊನೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿದ್ದ ಬಿ.ವೈ ವಿಜಯೇಂದ್ರ ಅವರ ನೇಮಕವಾಗಿದೆ. ತಕ್ಷಣದಿಂದ ಬರುವಂತೆ ನೇಮಕ ಮಾಡಲಾಗಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಹೀನಾಯ ಸೋಲು ಮತ್ತು ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಪ್ರಭಾವವನ್ನು ರಾಜ್ಯದಲ್ಲಿ ಹೆಚ್ಚಿಸುವ ನಿಟ್ಟಿನಲ್ಲಿ ಸಮರ್ಥ ನಾಯಕರ ಹುಡುಕಾಟವನ್ನು ಪಕ್ಷ ನಡೆಸಿತ್ತು.
Comments are closed.