ಕರಾವಳಿ

ಉಡುಪಿಯಲ್ಲಿ ಬೆಚ್ಚಿಬೀಳಿಸಿದ ಘಟನೆ: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ

Pinterest LinkedIn Tumblr

ಉಡುಪಿ: ತಾಯಿ ಮತ್ತು ಮೂವರು ಮಕ್ಕಳನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ನೇಜಾರು ಸಮೀಪದ ತೃಪ್ತಿ ನಗರದಲ್ಲಿ ಭಾನುವಾರ ಸಂಭವಿಸಿದೆ.

ಮೃತರನ್ನು ಹಸೀನಾ (46), ಅಫ್ನಾನ್ (23), ಅಜ್ಞಾಝ್ (21) ಮತ್ತು ಆಸಿಂ (12) ಎಂದು ಗುರುತಿಸಲಾಗಿದೆ. ಇನ್ನೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಚೂರಿಯಿಂದ ಚುಚ್ಚಿ ಕೊಲೆಗೈದು ದುಷ್ಕರ್ಮಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿದ್ದು ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Comments are closed.