ಕರಾವಳಿ

ಉಡುಪಿ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಅಮಾನುಷವಾಗಿ ಹತ್ಯೆಗೈದ ಹಂತಕ ಬೆಳಗಾವಿಯಲ್ಲಿ ಬಂಧನ..?

Pinterest LinkedIn Tumblr

ಉಡುಪಿ: ಉಡುಪಿಯ ಮಲ್ಪೆ ಪೊಲೀಸ್ ಠಾಣೆ‌ ವ್ಯಾಪ್ತಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ‌ ಹತ್ಯೆಗೈದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.

 

ಬೆಳಗಾವಿಯಲ್ಲಿ ಉಡುಪಿ ಪೊಲೀಸರು ಪ್ರವೀಣ್​​​​ ಅರುಣ್​​​ ಚೌಗಲೆ ಎಂಬಾತನನ್ನು ಬಂಧಿಸಿದ್ದು ಉಡುಪಿಗೆ ಕರೆತರುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಆರೋಪಿ ಮಹಾರಾಷ್ಟ್ರ ಸಾಂಗ್ಲಿ ಮೂಲದವನಾಗಿದ್ದಾನೆ ಎನ್ನಲಾಗಿದೆ.

ಮೊಬೈಲ್​​ ಟವರ್​ ಲೊಕೇಶನ್​​​ ಆಧರಿಸಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದ್ದು ಕೃತ್ಯಕ್ಕೆ ಕಾರಣ ಇನ್ನಷ್ಟೆ ಪೊಲೀಸರ ತನಿಖೆಯಿಂದ ಬೆಳಕಿಗೆ ಬರಬೇಕಿದೆ.

Comments are closed.