ಕರ್ನಾಟಕ

ವಿದ್ಯುತ್ ಕಳವು ಆರೋಪ: ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಎಫ್ಐಆರ್!

Pinterest LinkedIn Tumblr

ಬೆಂಗಳೂರು: ವಿದ್ಯುತ್ ಕಳ್ಳತನದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌.ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಬೆಸ್ಕಾಂ ಅಧಿಕಾರಿಗಳು ನೀಡಿದ ದೂರಿನ ಅನ್ವಯ ಕುಮಾರಸ್ವಾಮಿ ಅವರ ವಿರುದ್ಧ ಜಯನಗರ ಜಾಗೃತದಳದ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಮಂಗಳವಾರ ರಂದು ಅಪರಾಧ ಎಸಗಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಎಇಇ ಪ್ರಶಾಂತ್‌ ಕುಮಾರ್‌ ಎನ್ನುವರು ದೂರು ನೀಡಿದ್ದಾರೆ. ಈ ಹಿನ್ನೆಲೆ ಎಫ್‌ಐಆರ್‌ ದಾಖಲು ಮಾಡಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಎಚ್.ಡಿ ಕುಮಾರಸ್ವಾಮಿಯವರು ಬೆಂಗಳೂರಿನ ಜೆಪಿ ನಗರದ ತಮ್ಮ ನಿವಾಸದಲ್ಲಿ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಈ ಕುರಿತು ವಿಡಿಯೋ, ಫೋಟೋ ಸಮೇತ ಕಾಂಗ್ರೆಸ್ ಟ್ವೀಟ್ ಮಾಡಿತ್ತು.

ಇದಕ್ಕೂ ಮೊದಲು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಮನೆಗೆ ಬೆಸ್ಕಾಂ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು.

Comments are closed.