ಕರ್ನಾಟಕ

ಮತ್ತೋರ್ವ ಬಿಗ್ ಬಾಸ್ ಸ್ಪರ್ಧಿಗೆ ಕಾನೂನು ಸಂಕಷ್ಟ: ತನಿಷಾ ಕುಪ್ಪಂಡ ವಿರುದ್ಧ ಎಫ್ಐಆರ್..!

Pinterest LinkedIn Tumblr

ಬೆಂಗಳೂರು: ಈ ಬಾರಿಯ ಕನ್ನಡ ಬಿಗ್ ಬಾಸ್ ಸೀಸನ್‌ನ ಮತ್ತೋರ್ವ ಬಿಗ್ ಬಾಸ್ ಸ್ಪರ್ಧಿಗೆ ಸಂಕಷ್ಟ ಎದುರಾಗಿದೆ.

ತನಿಷಾ ಕುಪ್ಪಂಡ ವಿರುದ್ಧ ಬೆಂಗಳೂರು ಹೊರವಲಯದ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ (ಅಟ್ರಾಸಿಟಿ) ಪ್ರಕರಣ ದಾಖಲಾಗಿದೆ.

ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ.ಪದ್ಮ ಎನ್ನುವರು ತನಿಷಾ ಕುಪ್ಪುಂದ ವಿರುದ್ಧ ದೂರು ದಾಖಲಿಸಿದ್ದಾರೆ. ಬಾಸ್ ರಿಯಾಲಿಟಿ ಶೋ ನಲ್ಲಿ ಅವಹೇಳನಕಾರಿ ಪದ ಬಳಕೆ ಮಾಡುವ ಮೂಲಕ ಬೋವಿ ಜನಾಂಗಕ್ಕೆ ನಟಿ ತನಿಷಾ ಕುಪ್ಪಂಡ ಅವಮಾನ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇತ್ತೀಚೆಗೆ ಕನ್ನಡ ಬಿಗ್ ಬಾಸ್ ಶೋ ಸ್ಪರ್ಧಿ ವರ್ತೂರು ಸಂತೋಷ್‌ ಅವರನ್ನು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಆರೋಪದಲ್ಲಿ ಬಂಧಿಸಲಾಗಿತ್ತು. ತನಿಷಾ ಕುಪ್ಪುಂಡ ವಿರುದ್ದ ದೂರು ದಾಖಲಿಸಿ ಕ್ರಮ ಕೈಗೊಂಡು ಬಿಗ್ ಬಾಸ್ ಮನೆಯಿಂದ ಹೊರ ಹಾಕಬೇಕು ಎಂದು ಆಗ್ರಹಿಸಲಾಗಿದೆ.

Comments are closed.