ಕುಂದಾಪುರ: ಗಂಗೊಳ್ಳಿಯಲ್ಲಿ ಇತ್ತೀಚೆಗೆ ನಡೆದ ಬೆಂಕಿ ಅವಘಡ ವಿಚಾರದಲ್ಲಿ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರ ಅವರು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹಾಗೂ ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ನ.15ರಂದು ಬೆಂಗಳೂರಿನಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ, ಮನವಿ ಸಲ್ಲಿಸಿದರು.
ನ. 13ರಂದು ಅಗ್ನಿ ಅವಘಡದಲ್ಲಿ ಸುಮಾರು 8 ದೋಣಿಗಳು ಸಂಪೂರ್ಣ ಹಾನಿಯಾಗಿದ್ದು, 2 ದೋಣಿಗಳು ಭಾಗಶಃ ಹಾನಿ, 2 ಡಿಂಗಿ ಹಾಗೂ ಮೀನುಗಾರಿಕೆ ಬಲೆ ಹಾನಿಯಾಗಿದೆ. ಈ ಅವಘಡದಿಂದ ಮೀನುಗಾರರು ಆಘಾತ ಹೊಂದಿದ್ದಾರೆ. ಈಗಾಗಲೇ ತೂಫಾನ್, ಚಂಡಮಾರುತ ಹಾಗೂ ಇನ್ನಿತರೆ ಕಾರಣಗಳಿಂದ ಮೀನುಗಾರಿಕೆ ನಡೆಸದೆ ಆರ್ಥಿಕವಾಗಿ ನಷ್ಟ ಅನುಭವಿಸಿ ತೊಂದರೆಗೆ ಒಳಗಾಗಿದ್ದಾರೆ. ಆದ್ದರಿಂದ ಪ್ರಸ್ತುತ ಅಗ್ನಿ ಅವಘಡದಲ್ಲಿ ಹಾನಿಗೊಳಗಾದ ದೋಣಿಗಳಿಗೆ ರೂ 10ಕೋಟಿ ಪರಿಹಾರವನ್ನು ಮಂಜೂರು ಮಾಡುವಂತೆ ಇವರು ಸಿಎಂಗೆ ಮನವಿ ಸಲ್ಲಿಸಿದರು.
Comments are closed.